Latest

ಸಿಡಿ ಯುವತಿಯ ಮೆಡಿಕಲ್ ಟೆಸ್ಟ್ ಪೂರ್ಣ ; ಸ್ಥಳ ಪಂಚನಾಮೆ ಸಾಧ್ಯತೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿಯ ಮೆಡಿಕಲ್ ಟೆಸ್ಟ್ ನಡೆಸಲಾಗಿದೆ. ಇದರ ಬೆನ್ನಲ್ಲೇ ರಮೇಶ್ ಜಾರಕಿಹೊಳಿಗೆ ಸಂಕಷ್ಟ ಎದುರಾಗಿದೆ.

ಸಿಡಿ ಪ್ರಕರಣ ಬಹಿರಂಗವಾಗಿ 28 ದಿನಗಳ ಬಳಿಕ ಯುವತಿ ನಿನ್ನೆ ನ್ಯಾಯಾಲಯದ ಮುಂದೆ ಹಾಗೂ ಎಸ್ ಐಟಿ ಮುಂದೆ ಹಾಜರಾಗಿ ಹೇಳಿಕೆಗಳನ್ನು ದಾಖಲಿಸಿದ್ದಳು. ಹೆಚ್ಚಿನ ವಿಚಾರಣೆಗೆ ಎಸ್ ಐಟಿ ಇಂದು ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಿತ್ತು. ಇದರ ಬೆನ್ನಲ್ಲೇ ಯುವತಿ ಇಂದು ಎಸ್ ಐಟಿ ಮುಂದೆ ವಿಚಾರಣೆಗೆ ಹಾಜರಾಗಿದ್ದಾಳೆ. ವಿಚಾರಣೆಗೂ ಮುನ್ನ ಆಕೆಯನ್ನು ಬೌರಿಂಗ್ ಆಸ್ಪತ್ರೆಗೆ ಮೆಡಿಕಲ್ ಟೆಸ್ಟ್ ನಡೆಸಲಾಗಿದೆ.

ಇನ್ನು ಸ್ಥಳ ಮಹಜರ್ ನಡೆಸುವ ಸಾಧ್ಯತೆ ಇದ್ದು, ಅಲ್ಲಿಗೆ ಒಂದು ಹಂತದ ಪ್ರಕ್ರಿಯೆ ಪೂರ್ಣಗೊಳ್ಳುತ್ತದೆ.

ಇನ್ನೊಂದೆಡೆ ಯುವತಿ ಹೇಳಿಕೆ ದಾಖಲಿಸಿದ ಬೆನ್ನಲ್ಲೇ ರಮೇಶ್ ಜಾರಕಿಹೊಳಿಗೆ ಬಂಧನ ಭೀತಿ ಎದುರಾಗಿದ್ದು, ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ. ಅಲ್ಲದೇ ಯುವತಿ ಮೆಡಿಕಲ್ ಟೆಸ್ಟ್ ಬಳಿಕ ರಮೇಶ್ ಜಾರಕಿಹೊಳಿಗೂ ವೈದ್ಯಕೀಯ ತಪಾಸಣೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಸಂಕಷ್ಟದಿಂದ ಪಾರು ಮಾಡು; ಲಕ್ಷ್ಮಿಯ ಪಾದಕ್ಕೆರಗಿದ ರಮೇಶ ಜಾರಕಿಹೊಳಿ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button