ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಸಿಎಂ ಯಡಿಯೂರಪ್ಪ ವಿರುದ್ಧ ಹೈಕಮಾಂಡ್ ಗೆ ಹಾಗೂ ರಾಜ್ಯಪಾಲರಿಗೆ ದೂರು ನೀಡಿದ ವಿಚಾರವಾಗಿ ಪ್ರತಿಕ್ರಿಯಿಸಿದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅಸಮಾಧಾನದಿಂದ ಪತ್ರ ಬರೆದಿಲ್ಲ, ಇಲಾಖೆ ವಿಚಾರವಾಗಿ ಪತ್ರ ಬರೆದಿದ್ದೇನೆ ಎಂದಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಇಲ್ಲಿ ಅಸಮಾಧಾನ ಎಂಬ ಪ್ರಶ್ನೆ ಇಲ್ಲ. ಇಲಾಖೆ ವಿಚಾರವಾಗಿ ಪತ್ರ ಬರೆದಿದ್ದೇನೆ. ಇಲಾಖೆ ವಿಚಾರವನ್ನು ರಾಜ್ಯಪಾಲರೊಂದಿಗೆ ಮಾತನಾಡಬೇಕಿತ್ತು. ಹಾಗಾಗಿ ಪತ್ರ ಬರೆದು ಮಾತನಾಡಿಕೊಂಡು ಬಂದಿದ್ದೇನೆ. ಇಲಾಖೆಗೆ ಸಂಬಂಧಿಸಿದ ಅಭಿವೃದ್ಧಿ ವಿಚಾರವಾಗಿಯೇ ದೆಹಲಿಗೂ ಹೋಗಬೇಕು. ಕೇಂದ್ರ ಮಂತ್ರಿಗಳನ್ನು ಭೇಟಿಯಾಗಿ ಚರ್ಚಿಸಬೇಕಿದೆ. ಇದರಲ್ಲಿ ವಿಶೇಷವೇನೂ ಇಲ್ಲ ಎಂದರು.
ಗ್ರಾಮೀಣಾಭಿವೃದ್ಧಿ ಇಲಾಖೆಗೆ ಬಂದ ಹಣ ಶಾಸಕರಿಗೆ ಹೋಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದರ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಈಶ್ವರಪ್ಪ, ಅದು ಆಂತರಿಕ ವಿಚಾರ. ಮಾಧ್ಯಮದ ಮುಂದೆ ಹೇಳಲು ಸಾಧ್ಯವಿಲ್ಲ ಎಂದು ತಿಳಿಸಿದರು.
ಯಡಿಯೂರಪ್ಪ ವಿರುದ್ಧ ತಿರುಗಿಬಿದ್ದ ಈಶ್ವರಪ್ಪ: ಹೈಕಮಾಂಡ್ ಗೆ ದೂರು
ನಮ್ಮದು ಶಿಸ್ತಿನ ಪಕ್ಷ; ರಾಜ್ಯಪಾಲರಿಗೆ ದೂರು ನೀಡಿದ್ದು ಸೂಕ್ತವಲ್ಲ ಎಂದ ಗೃಹ ಸಚಿವ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ