ಪ್ರಗತಿವಾಹಿನಿ ಸುದ್ದಿ; ಮೈಸೂರು: ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ರಾಜ್ಯಪಾಲರು ಹಾಗೂ ಬಿಜೆಪಿ ವರಿಷ್ಠರಿಗೆ ದೂರು ನೀಡಿರುವ ಬೆನ್ನಲ್ಲೇ ಎಲ್ಲರ ಕೆಂಗಣ್ಣಿಗೆ ಗುರಿಯಾಗಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪಗೆ ಇದೀಗ ಸಚಿವ ಸ್ಥಾನ ಕಳೆದುಕೊಳ್ಳುವ ಭೀತಿ ಎದುರಾಗಿದೆ.
ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡಿ, ಇಲಾಖೆಯ ಅನುದಾನವನ್ನು ಶಾಸಕರಿಗೆ ಹಂಚಿದ್ದಾರೆ ಎಂದು ಸಿಎಂ ವಿರುದ್ಧ ರಾಜ್ಯಪಾಲರು ಹಾಗೂ ವರಿಷ್ಠರಿಗೆ ಪತ್ರದ ಮೂಲಕ ದೂರು ನೀಡಿದ್ದರು. ಇದು ಬಿಜೆಪಿ ನಾಯಕರ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಬೆಳವಣಿಗೆ ಬೆನ್ನಲ್ಲೇ ಈಶ್ವರನ್ನವರನ್ನು ಸಂಪುಟದಿಂದ ಕೈಬಿಡುವಂತೆ ಸಿಎಂ ಆಪ್ತರು ಆಗ್ರಹಿಸಿದ್ದಾರೆ ಎನಲಾಗಿದೆ. ಈ ಹಿನ್ನೆಲೆಯಲ್ಲಿ ಸಚಿವ ಸ್ಥಾನ ಕಳೆದುಕೊಳ್ಳುವ ಭೀತಿಯಲ್ಲಿರುವ ಈಶ್ವರಪ್ಪ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿದ್ದು, ಚಾಮುಂಡಿ ದೇವಿ ದರ್ಶನ ಪಡೆದಿದ್ದಾರೆ.
ಇಂದು ಮುಂಜಾನೆಯೇ ಕುಟುಂಬ ಸಮೇತರಾಗಿ ಚಾಮುಂಡಿ ಬೆಟ್ಟಕ್ಕೆ ತೆರಳಿದ ಈಶ್ವರಪ್ಪ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಮಾತನಾಡಿದ ಈಶ್ವರಪ್ಪ ಮಧ್ಯಾಹ್ನ ಸುದ್ದಿಗೋಷ್ಠಿ ನಡೆಸಿ ಎಲ್ಲವನ್ನೂ ಹೇಳುವುದಾಗಿ ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ