Latest

ನಮ್ಮಲ್ಲಿ ಹೊಗೆ ಶುರುವಾಗಿದೆಯಷ್ಟೇ, ಕಾಂಗ್ರೆಸ್ ನಲ್ಲಿ ಬೆಂಕಿಯೇ ಬಿದ್ದಿದೆ ಎಂದ ಬಿಜೆಪಿ ರಾಜ್ಯಾಧ್ಯಕ್ಷ

ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಸಚಿವ ಕೆ.ಎಸ್.ಈಶ್ವರಪ್ಪ ಸಿಎಂ ಯಡಿಯೂರಪ್ಪ ವಿರುದ್ಧ ರಾಜ್ಯಪಾಲರಿಗೆ, ಹೈಕಮಾಂಡ್ ಗೆ ಪತ್ರ ಬರೆದು ದೂರು ನೀಡಿದ ವಿಚಾರವಾಗಿ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ನಮ್ಮಲ್ಲಿ ಕೆಲ ವ್ಯತ್ಯಾಸಗಳಾಗಿವೆ. ಅವುಗಳನ್ನು ಸರಿಪಡಿಸುವ ವ್ಯವಸ್ಥೆಯಿದೆ. ಆದರೆ ಕಾಂಗ್ರೆಸ್ ನಲ್ಲಿ ಸರಿಪಡಿಸುವ ವ್ಯವಸ್ಥೆಯೇ ಇಲ್ಲ ಎಂದು ಹೇಳಿದರು.

ಕಲಬುರ್ಗಿಯಲ್ಲಿ ಮಾತನಾಡಿದ ಅವರು, ಈಶ್ವರಪ್ಪ ದೂರು ವಿಚಾರವಾಗಿ ಕೆಲ ವ್ಯತ್ಯಾಸಗಳಾಗಿರುವುದು ನಿಜ. ಎರಡು ದಿನಗಳಲ್ಲಿ ಸಮಸ್ಯೆ ಬಗೆಹರಿಸುತ್ತೇವೆ ಎಂದರು.

Home add -Advt

ಸಮಸ್ಯೆಗಳಾದರೂ ಬಿಜೆಪಿಯಲ್ಲಿ ಪ್ರಜಾಪ್ರಭುತ್ವ ಚೆನ್ನಾಗಿದೆ. ಬಗೆಹರಿಸಲು ವ್ಯವಸ್ಥೆಯಿದೆ. ಆದರೆ ಕಾಂಗ್ರೆಸ್ ನಲ್ಲಿ ಪ್ರಜಾಪ್ರಭುತ್ವವೇ ಇಲ್ಲ. ನಮ್ಮಲ್ಲಿ ಹೊಗೆ ಶುರುವಾಗಿದೆ ಅಷ್ಟೇ. ಕಾಂಗ್ರೆಸ್ ನಲ್ಲಿ ಬೆಂಕಿಯೇ ಬಿದ್ದಿದೆ ಎಂದು ಹೇಳುವ ಮೂಲಕ ಸಮರ್ಥಿಸಿಕೊಂಡಿದ್ದಾರೆ.

ಸಿಎಂ ವಿರುದ್ಧ ದೂರು: ಸಚಿವ ಈಶ್ವರಪ್ಪ ಸ್ಪಷ್ಟನೆ

Related Articles

Back to top button