ಪ್ರಗತಿವಾಹಿನಿ ಸುದ್ದಿ; ಮುಂಬೈ: ಇತ್ತೀಚೆಗಷ್ಟೇ ಬಾಲಿವುಡ್ ನಟಿ ಆಲಿಯಾ ಭಟ್, ಆಮೀರ್ ಖಾನ್, ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಕೊರೊನಾ ಸೋಂಕಿಗೆ ತುತಾಗಿದ್ದರು. ಇದರ ಬೆನ್ನಲ್ಲೇ ಇದೀಗ ಬಾಲಿವುಡ್ ಕಿಲಾಡಿ ಅಕ್ಷಯ್ ಕುಮಾರ್ ಗೂ ಕೊರೊನಾ ಸೋಂಕು ತಗುಲಿದೆ.
ಈ ಕುರಿತು ಮಾಹಿತಿ ನೀಡಿರುವ ಅಕ್ಷಯ್ ಕುಮಾರ್, ನನಗೆ ಕೊರೊನಾ ಪಾಸಿಟಿವ್ ಬಂದಿದ್ದು, ಹೋಂ ಕ್ವಾರಂಟೈನ್ ನಲ್ಲಿದ್ದೇನೆ. ಕೊರೊನಾ ಕುರಿತ ಎಲ್ಲಾ ಮಾರ್ಗಸೂಚಿಗಳನ್ನು ನಾನು ಪಾಲಿಸುತ್ತೇನೆ. ಅಗತ್ಯ ವೈದ್ಯಕೀಯ ನೆರವನ್ನು ಪಡೆಯುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಇನ್ನು ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಟ್ವಿಟರ್ ನಲ್ಲಿ ಮನವಿ ಮಾಡಿದ್ದಾರೆ.
ಸಿಡಿ ಯುವತಿ ಜೊತೆ ಮಾಜಿ ಸಚಿವ ಸುಧಾಕರ್ ನಂಟು; ಸ್ಫೋಟಕ ಮಾಹಿತಿ ಬಹಿರಂಗ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ