Latest

ನಕ್ಸಲರ ಅಟ್ಟಹಾಸ: 22 ಯೋಧರು ಹುತಾತ್ಮ

ಪ್ರಗತಿವಾಹಿನಿ ಸುದ್ದಿ; ಸುಕ್ಮಾ: ಛತ್ತೀಸ್ ಗಢದಲ್ಲಿ ನಕ್ಸಲರು ಅಟ್ಟಹಾಸ ಮೆರೆದಿದ್ದು, ನಕ್ಸಲರ ಗುಂಡಿನ ದಾಳಿಗೆ 22 ಯೋಧರು ಹುತಾತ್ಮರಾಗಿದ್ದು, 31ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಗಳು ಗಾಯಗೊಂಡಿದ್ದಾರೆ.

ಸುಕ್ಮಾ ಜಿಲ್ಲೆಯಲ್ಲಿ 300 ನಕ್ಸಲರು ಸಭೆ ನಡೆಸುತ್ತಿದ್ದಾರೆ ಎಂಬ ಗುಪ್ತಚರ ಇಲಾಖೆ ಮಾಹಿತಿ ಮೇರೆಗೆ ಸಿಆರ್ ಪಿಎಫ್ ಯೋಧರು ನಕ್ಸರು ಇದ್ದ ಅರಣ್ಯ ಪ್ರದೇಶವನ್ನು ಸುತ್ತಿವರೆಯುತ್ತಾರೆ. ಈ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ 200-300 ನಕ್ಸಲರು ಭದ್ರತಾ ಪಡೆಗಳ ಮೇಲೆಯೇ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಗುಂಡಿನ ಚಕಮಗಿಯಲ್ಲಿ 22 ಯೋಧರು ಹುತಾತ್ಮರಾಗಿದ್ದಾರೆ.

ಸುಮಾರು 4 ಗಂಟೆಗಳ ಕಾಲ ನಕ್ಸಲರು ಹಾಗೂ ಯೋಧರ ನಡುವೆ ಗುಂಡಿನ ಚಕಮಕಿ ನಡೆದಿದೆ. 31 ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇದೇ ವೇಳೆ ನಕ್ಸಲರ ವಿರುದ್ಧ ಯೋಧರು ನಡೆಸಿದ ಕಾರ್ಯಾಚರಣೆಯಲ್ಲಿ 15 ನಕ್ಸಲರನ್ನು ಹತ್ಯೆ ಮಾಡಲಾಗಿದೆ. ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button