ಪ್ರಗತಿವಾಹಿನಿ ಸುದ್ದಿ; ಮುಂಬೈ: ಹಫ್ತಾ ವಸೂಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ ಮುಖ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಆಂಟಿಲಿಯಾ ನಿವಾಸದ ಕೇಸ್ ನಲ್ಲಿ ಸದ್ಯ ಎನ್ ಐಎ ವಶದಲ್ಲಿರುವ ಮಾಜಿ ಪೊಲೀಸ್ ಅದಿಕಾರಿ ಸಚಿನ್ ವಾಜೆ ಅವರಿಗೆ ಗೃಹ ಸಚಿವ ಅನಿಲ್ ದೇಶ್ ಮುಖ್ ಅವರು ತಿಂಗಳಿಗೆ 100 ಕೋಟಿ ರೂಪಾಯಿ ಹಣ ವಸೂಲಿ ಮಾಡುವಂತೆ ಸೂಚಿಸಿದ್ದರು ಎಂದು ಆರೋಪಿಸಿ ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಸಿಎಂ ಉದ್ಧವ್ ಠಾಕ್ರೆಗೆ ಪತ್ರ ಬರೆದಿದ್ದರು. ಈ ಪ್ರಕರಣ ಮಹಾ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿತ್ತು.
ಅಲ್ಲದೇ ಈ ಕುರಿತು ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದ ಪರಮ್ ಬೀರ್ ಸಿಂಗ್, ಗೃಹ ಸಚಿವ ಅನಿಲ್ ದೇಶ್ ಮುಖ್ ವಿರುದ್ಧ ಸಿಬಿಐ ತನಿಖೆಗೆ ಆದೇಶ ನೀಡುವಂತೆ ಒತ್ತಾಯಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಪ್ರಕರಣವನ್ನು ಸಿಬಿಐ ತನಿಖೆಗೆ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಅನಿಲ್ ದೇಶ್ ಮುಖ್ ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಕಮಲ ಹಿಡಿಯಲು ಮುಂದಾದ ಲಖನ್ ಜಾರಕಿಹೊಳಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ