ಬಿಜೆಪಿಗೆ ಬೆಂಬಲವಿಲ್ಲ ಎಂದ ಕೇಂದ್ರ ಮಾಜಿ ಸಚಿವ ಬಾಬಾಗೌಡ ಪಾಟೀಲ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಚುನಾವಣೆಗೆ ಕೇವಲ ಒಂದು ವಾರವಿರುವಾಗ ಭಾರತೀಯ ಜನತಾಪಾರ್ಟಿಗೆ ದೊಡ್ಡ ಹೊಡೆತ ಬಿದ್ದಿದೆ.
ಕೇಂದ್ರದ ಮಾಜಿ ಸಚಿವ, ರೈತ ನಾಯಕ ಬಾಬಾಗೌಡ ಪಾಟೀಲ ಬಿಜೆಪಿಗೆ ತಮ್ಮ ಬೆಂಬಲವಿಲ್ಲ. ಬಿಜೆಪಿ ಸರಕಾರ ಕಿತ್ತೆಸೆಯುವುದೇ ತಮ್ಮ ಗುರಿ ಎಂದು ಘೋಷಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬೆಳಗಾವಿಯ ಚಿಕ್ಕಬಾಗೇವಾಡಿಯಲ್ಲಿ ಬಾಬಾಗೌಡ ಪಾಟೀಲ್ ಅವರ ನಿವಾಸಕ್ಕೆ ಗುರುವಾರ ಭೇಟಿ ಮಾಡಿ, ಮಾತುಕತೆ ನಡೆಸಿದರು. ಕೇಂದ್ರದ ಮಾಜಿ ಸಚಿವ ಕೆ.ಎಚ್. ಮುನಿಯಪ್ಪ, ಕಾಂಗ್ರೆಸ್ ಕಿಸಾನ್ ಘಟಕದ ರಾಜ್ಯಾಧ್ಯಕ್ಷ ಸಚಿನ್ ಮೀಗಾ ಹಾಜರಿದ್ದರು.
ಈ ವೇಳೆ ಮಾತನಾಡಿದ ಡಿ.ಕೆ.ಶಿವಕುಮಾರ, ಕಾಂಗ್ರೆಸ್ ವರಿಷ್ಠ ರಾಹುಲ ಗಾಂಧಿ ಸೇರಿದಂತೆ ಎಲ್ಲ ನಾಯಕರ ಸೂಚನೆಯಂತೆ ಬಾಬಾಗೌಡ ಪಾಟೀಲ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದೇನೆ. ನಮ್ಮ ಪಕ್ಷದ ಅಭ್ಯರ್ಥಿಗೆ ಬೆಂಬಲ ನೀಡುವಂತೆ ಕೋರಿದ್ದೇನೆ ಎಂದರು.
ಬಾಬಾಗೌಡ ಪಾಟೀಲ ಮಾತನಾಡಿ, ಬಿಜೆಪಿಗೆ ಯಾವುದೇ ಕಾರಣದಿಂದ ಮತ ಹಾಕುವುದಿಲ್ಲ. ಬಿಜೆಪಿಯನ್ನು ಆದಷ್ಟು ಬೇಗ ಕಿತ್ತು ಹಾಕುವುದೇ ನಮ್ಮ ಗುರಿ ಎಂದರು.
ಕಾಂಗ್ರೆಸ್ ಪರ ಪ್ರಚಾರ ಮಾಡುವ ಬಗ್ಗೆ ಕಾರ್ಯಕರ್ತರ ಜೊತೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುವುದಾಗಿ ತಿಳಿಸಿದರು.
ಕಾಂಗ್ರೆಸ್ ಗೆ ಸೇರ್ಪಡೆಯಾದ ಜೆಡಿಎಸ್ ಮುಖಂಡರು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ