ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಖಂಡಿಸಿ ವಕೀಲರು ಸಬ್ ರಿಜಿಸ್ಟ್ರಾರ್ ಗೆ ಘೇರಾವ್ ಹಾಕಿ ಪ್ರತಿಭಟನೆ ನಡೆಸಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ದುಡ್ಡು ಕೊಟ್ಟರೆ ಮಾತ್ರ ಜನಸಾಮಾನ್ಯರಿಗೆ ಕೆಲಸ ಮಾಡಿಕೊಡಲಾಗುತ್ತಿದೆ. ಏಜೆಂಟ್ ಗಳ ಹಾವಳಿ ಮಿತಿ ಮೀರಿದ್ದು, ಅಧಿಕಾರಿಗಳು ವಕೀಲರಿಗೂ ಕ್ಯಾರೇ ಎನ್ನುತ್ತಿಲ್ಲ. 5-50 ಸಾವಿರ ರೂಪಾಯಿವರೆಗೆ ಲಂಚ ಪಡೆಯುತ್ತಿದ್ದಾರೆ ಎಂದು ವಕೀಲರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹೊಸದಾಗಿ ವಿವಾಹವಾಗುವ ಜೋಡಿಗಳಿಗೂ ರಜಿಸ್ಟರ್ ಮಾಡಿಕೊಳ್ಳಲು 5 ಸಾವಿರ ಲಂಚಕ್ಕೆ ಬೇಡಿಕೆ ಇಡುತ್ತಿದ್ದಾರೆ. ಯಾವುದೇ ಕೆಲಸ ಮಾಡಿಕೊಡಬೇಕು ಎಂದರೂ ಲಂಚ ಕೇಳುತ್ತಿದ್ದಾರೆ ಎಂದು ಆರೋಪಿಸಿ ಬೆಳಗಾವಿ ಬಾರ್ ಅಸೋಸಿಯೇಷನ್ ಪದಾಧಿಕಾರಿಗಳು ಸಬ್ ರಜಿಸ್ಟಾರ್ ಸಂಕನಗೌಡಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಅಲ್ಲದೇ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರು ಬೆಳಗಾವಿ ಸಬ್ ರಜಿಸ್ಟ್ರಾರ್ ಕಚೇರಿಯ ಕರ್ಮಕಾಂಡದ ಬಗ್ಗೆ ತನಿಖೆಗೆ ಆದೇಶಿಸಬೇಕು ಎಂದು ಆಗ್ರಹಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ