ಏ.11ರಿಂದ 14ರವರೆಗೆ ದೇಶಾದ್ಯಂತ ವ್ಯಾಕ್ಸಿನ್ ಉತ್ಸವ
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶಾದ್ಯಂತ ಕೊರೊನಾ ಮೊದಲ ಅಲೆ ಮುಗಿದಿದ್ದು, ಎರಡನೇ ಅಲೆ ಆರಂಭವಾಗಿದೆ. ಕೋವಿಡ್ ಪಾಸಿಟಿವ್ ಕೇಸ್ ಗಳ ಸಂಖ್ಯೆ ದಿಢೀರ್ ಹೆಚ್ಚುತ್ತಿವೆ. ಏಕಾಏಕಿ ಕೊರೊನಾ ಪ್ರಕರಣಗಳ ಹೆಚ್ಚಳ ಸಮಸ್ಯೆ ಸೃಷ್ಟಿಸಿದೆ. ಕೊರೊನಾ ವೈರಸ್ ನ್ನು ಯಾರೂ ಕೂಡ ಲಘುವಾಗಿ ಪರಿಗಣಿಸಬಾರದು ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚಿಸಿದ ಬಳಿಕ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಕೆಲ ರಾಜ್ಯಗಳಲ್ಲಿ ಕೊರೊನಾ ಪರಿಸ್ಥಿತಿ ಚಿಂತಾಜನಕವಾಗಿದೆ. ಮೊದಲ ಕೊರೊನಾ ಅಲೆಗಿಂತ ಎರಡನೆ ಅಲೆ ಹೆಚ್ಚು ಅಪಾಯಕಾರಿ. ಈಗ ಕೊರೊನಾ ಪಾಸಿಟಿವ್ ಬಂದವರಲ್ಲಿ ಯಾರಲ್ಲಿಯೂ ಕೋವಿಡ್ ಲಕ್ಷಣಗಳು ಕಂಡಿಬಂದಿಲ್ಲ. ವೈದ್ಯಕೀಯ ಸಿಬ್ಬಂದಿ, ನರ್ಸ್ ಗಳು, ಸೇರಿದಂತೆ ಕೊರೊನಾ ವಾರಿಯರ್ಸ್ ಮೊದಲ ಅಲೆಯ ಅನುಭವವನ್ನು ಸಾರ್ಥಕವಾಗಿ ಬಳಸಿಕೊಳ್ಳಬೇಕು. ಟೆಸ್ಟ್ ಟ್ರಾಕ್ ಟ್ರೀಟ್ ಮೂಲಕ ಕೊರೊನಾ ಎರಡನೆ ಅಲೆ ತಡೆಯಲು ಸಾಧ್ಯ ಎಂದರು.
ಕೊರೊನಾ ಸೋಂಕು ನಿಯಂತ್ರಣಕ್ಕೆ ಯುದ್ಧೋಪಾದಿಯಲ್ಲಿ ಕ್ರಮ ಕೈಗೊಳ್ಳುವ ಅಗತ್ಯವಿದೆ. ಆದರೆ ದೇಶಾದ್ಯಂತ ಮತ್ತೆ ಲಾಕ್ ಡೌನ್ ಜಾರಿ ಮಾಡುವ ಅಗತ್ಯವಿಲ್ಲ. 2-3 ವಾರಗಳ ಕಾಲ ಕಠಿಣ ನಿಯಮ ಜಾರಿಗೊಳಿಸಿ. ಲಾಕ್ ಡೌನ್ ಬದಲಿಗೆ ನೈಟ್ ಕರ್ಫ್ಯೂಗೆ ಹೆಚ್ಚಿನ ಆದ್ಯತೆ ನೀಡಬೇಕು. ನೈಟ್ ಕರ್ಫ್ಯೂವನ್ನು ಕೊರೊನಾ ಕರ್ಫ್ಯು ಎಂದು ಕರೆಯೋಣ ಎಂದು ಹೇಳಿದರು.
ಕೊರೊನಾ ತಡೆಯಲು ಮೈಕ್ರೋ ಕಂಟೇನ್ಮೆಂಟ್ ಝೋನ್ ಆರಂಭಿಸಿ. ಕೊರೊನಾ ಟೆಸ್ಟ್ ಗಳನ್ನು ಹೆಚ್ಚಿಸಬೇಕು. ಪಾಸಿಟಿವ್ ಕೇಸ್ ಶೇ. 5ಕ್ಕಿಂತ ಕಡಿಮೆಗೊಳಿಸಬೇಕು. ಕೊರೊನಾ ಲಸಿಕೆ ನೀಡಿಕೆ ಅಭಿಯಾನ ಚುರುಕುಗೊಳಿಸಿ. ಏ.11ರಿಂದ 14ರವರೆಗೆ ದೇಶಾದ್ಯಂತ ವ್ಯಾಕ್ಸಿನ್ ಉತ್ಸವ ಆರಂಭಿಸಲಾಗುವುದು. ಪ್ರತಿಯೊಬ್ಬರೂ ಜಾಗೃತರಾಗಿ ಕೊವಿಡ್ ನಿಯಮ ಪಾಲಿಸಿ ಎಂದು ಸೂಚಿದರು.
ಕರ್ನಾಟಕದಲ್ಲಿ ಪರಿಸ್ಥಿತಿ ಗಂಭೀರವಾಗಿದೆ ಎನ್ನುವ ಅಂಶವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಧಾನಿಗಳ ಗಮನಕ್ಕೆ ತಂದಿದ್ದು, ಹೆಚ್ಚು ಅಪಾಯಕಾರಿಯಾಗಿರುವ 8 ಜಿಲ್ಲೆಗಳಲ್ಲಿ ಕೊರೋನಾ ಕರ್ಫ್ಯೂ ಜಾರಿ ಮಾಡುವ ಇಂಗಿತ ವ್ಯಕ್ತವಾಗಿದೆ.
ಜೊತೆಗೆ ಇಡೀ ರಾಜ್ಯದಲ್ಲಿ ಉಪಚುನಾವಣೆ ಬಳಿಕ ಇನ್ನಷ್ಟು ಕಠಿಣ ನಿಯಮ ಜಾರಿಯಾಗಲಿದೆ.
ಪ್ರಯಾಣಿಕರೇ ಎಚ್ಚರ… ನಾಳೆಯೂ ಮುಂದುವರಿಯಲಿದೆ ಮುಷ್ಕರ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ