ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕೊರೊನಾ ಸಂದರ್ಭದಲ್ಲಿ ಭಾರೀ ಭ್ರಷ್ಟಾಚಾರ ನಡೆದಿದೆ. 16,000 ಕೋಟಿ ಖರ್ಚಿನ ಬಗ್ಗೆ ಮಾಹಿತಿ ನೀಡಿಲಿ. 20 ಲಕ್ಷ ಕೋಟಿ ಯಾರಿಗೆ ಹಂಚಿದ್ದಾರೆ ಎಂಬುದನ್ನು ರಾಜ್ಯ ಸರ್ಕಾರ ಮೊದಲು ಹೇಳಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ವಿಪಕ್ಷದವರನ್ನು ಕರೆದು ಸಭೆ ಮಾಡುತ್ತೇವೆ ಎಂದಿದ್ದಾರೆ. ಈಗ ಸರ್ವಪಕ್ಷ ಸಭೆ ಕರೆಯುವ ಅಗತ್ಯವೇನಿದೆ. ಕೊರೊನಾ ಸಂದರ್ಭದಲ್ಲಿ ಭಾರತದ ಇತಿಹಾಸದಲ್ಲೇ ಕಂಡು ಕೇಳರಿಯದಷ್ಟು ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆದಿದೆ. ಮಾಡಬಾರದ್ದು ಮಾಡಿ ದೇಶಕ್ಕೆ, ರಾಜ್ಯಕ್ಕೆ ಅನ್ಯಾಯ ಮಾಡಲಾಗಿದೆ. ಈಗ ಸಭೆ ಕರೆಯುತ್ತೇವೆ ಎನ್ನುತ್ತಿದ್ದಾರೆ. ಮನಸ್ಸಿಗೆ ಬಂದಂತೆ ಸರ್ಕಾರ ನಡೆಸುತ್ತಿದ್ದಾರೆ ಎಂದು ಕಿಡಿಕಾರಿದರು.
ಮೊದಲು ಕೊರೊನಾ ಬಂದಾಗ ದೀಪ ಬೆಳಗಿ, ಜಾಗಟೆ ಹೊಡೆಯಿರಿ ಎಂದರು. ಅದೆಲ್ಲವನ್ನು ದೇಶದ ಜನರು ನಿಷ್ಠೆಯಿಂದ ಮಾಡಿದ್ದಾಯಿತು. ಈಗ ಎರಡನೇ ಅಲೆ ಬಂದಿದೆ. ಕೊರೊನಾ ನಿಯಂತ್ರಣದಲ್ಲಿ ಸರ್ಕಾರಗಳು ವಿಫಲವಾಗಿವೆ. ಈಗ ಕರೊನಾ ಕರ್ಫ್ಯೂ ಜಾರಿ ಮಾಡುತ್ತಿದ್ದಾರೆ. ನೈಟ್ ಕರ್ಫ್ಯೂ ಜಾರಿ ಮಾಡುವುದರಿಂದ ಏನೂ ಪ್ರಯೋಜನವಾಗಲ್ಲ. ರಾತ್ರಿ 10ರಿಂದ ಬೆಳಿಗ್ಗೆ 5ರವರೆಗೆ ಕರ್ಫ್ಯೂ ಮಾಡುತ್ತಿರುವುದಾದರೂ ಏಕೆ? ಇಷ್ಟ ಬಂದಂತೆ ನಿರ್ಧಾರಗಳನ್ನು ಜಾರಿ ಮಾಡುತ್ತಿದ್ದಾರೆ ಎಂದು ಗುಡುಗಿದರು.
ಶನಿವಾರದಿಂದಲೇ ರಾಜ್ಯದ 8 ಜಿಲ್ಲೆಗಳಲ್ಲಿ ಕೊರೋನಾ ಕರ್ಫ್ಯೂ
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಿಲ್ ಲೆಸ್ ಆಸ್ಪತ್ರೆ – ಡಿಕೆಶಿ
ಪ್ರಧಾನಮಂತ್ರಿ ನಡೆಸಿದ ವಿಡಿಯೋ ಕಾನ್ಫರೆನ್ಸ್ ಮುಖ್ಯಾಂಶಗಳು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ