ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಜಾರಿಗೆ ತಂದಿರುವ ಕೊರೊನಾ ಕರ್ಫ್ಯೂ ವಿಚಾರವಾಗಿ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ದೇಶದ ಪ್ರಧಾನಿ ಮೋದಿ ಅಂಧಾ ದರ್ಬಾರ್‌ನಿಂದ ಸಿಎಂ ಯಡಿಯೂರಪ್ಪ ಸ್ಪೂರ್ತಿ ಪಡೆದರೆ, ಮುಖ್ಯಮಂತ್ರಿಗಳಿಂದ ಪ್ರೇರಣೆ ಪಡೆದು ಕೆಲವು ಜಿಲ್ಲಾಧಿಕಾರಿಗಳು ಕೊರೊನಾ ನಿಯಂತ್ರಣದ ಹೆಸರಲ್ಲಿ ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ರಾಜ್ಯದ ಆಯ್ದ ನಗರಗಳಲ್ಲಿ ರಾತ್ರಿ ಕರ್ಪ್ಯೂ ಹೇರಿರುವ ಬಿಜೆಪಿ ಸರ್ಕಾರದ ಕ್ರಮ, ಕೊರೊನಾ ಓಡಿಸಲು ತಟ್ಟೆ ಬಡಿಯುವ ಕ್ರಮದಷ್ಟೇ ಬಾಲಿಷವಾದುದು. ದೆಹಲಿಲ್ಲೊಬ್ಬರು ಪಾಳೆಯಗಾರ, ರಾಜ್ಯದಲ್ಲಿ ಒಬ್ಬರು ಮಾಂಡಲಿಕ! ಭಲೇ ಜೋಡಿ! ಎಂದು ಸಿದ್ದರಾಮಯ್ಯ ಕಿಡಿಕಾರಿದದರೆ.
ರಾತ್ರಿ ತೆರೆದಿರುವ ಹೊಟೇಲ್, ಚಿತ್ರಮಂದಿರ ಮತ್ತು ಅಂಗಡಿಮುಂಗಟ್ಟುಗಳನ್ನು ಮುಚ್ಚಿದರೆ ಸಾಲದೇ? ಕೊರೊನಾ ನಿಯಂತ್ರಣಕ್ಕೆ ಯಾವ ರೀತಿಯಲ್ಲಿಯೂ ಉಪಯೋಗವಾಗದ ಆಯ್ದ ನಗರಗಳಲ್ಲಿ ರಾತ್ರಿ ಕರ್ಪ್ಯೂವಿನ ನಾಟಕ ಯಾಕೆ ಮುಖ್ಯಮಂತ್ರಿಗಳೇ ಎಂದು ಪ್ರಶ್ನಿಸಿದ್ದಾರೆ.
ಕೊರೊನಾ ನಿಯಂತ್ರಿಸುವ ಪ್ರಾಮಾಣಿಕ ಇಚ್ಚೆ ಇದ್ದರೆ ಆರೋಗ್ಯ ಸಚಿವ ಸುಧಾಕರ್ ಮೊದಲು ಕೊರೊನಾ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಕ್ರಮಕೈಗೊಳ್ಳಬೇಕು, ಕೋವಿಡ್ ಪರೀಕ್ಷೆ ಹೆಚ್ಚಿಸಬೇಕು ಮತ್ತು ಸೋಂಕಿತರಿಗೆ ತಕ್ಷಣ ಚಿಕಿತ್ಸೆ ನೀಡಬೇಕು. ಕೋವಿಡ್ ವ್ಯಾಕ್ಸಿನ್ ಪ್ರಾರಂಭಿಸಿ 80 ದಿನಗಳು ಕಳೆದರೂ ಕೇವಲ ಶೇಕಡಾ ಒಂದರಷ್ಟು ಜನಸಂಖ್ಯೆಗೆ ಮಾತ್ರ ನೀಡಲು ಸಾಧ್ಯವಾಗಿದೆ. ರಾಜ್ಯದಲ್ಲಿ ಈಗಾಗಲೇ ವ್ಯಾಕ್ಸಿನ್ ಕೊರತೆಯ ದೂರು ಕೇಳಿಬರತೊಡಗಿದೆ. ಹೀಗಿರುವಾಗ ಇಂತಹ ಗಿಮಿಕ್ ಗಳಾದರೂ ಯಾಕೆ ಬೇಕು ಎಂದು ಗುಡುಗಿದ್ದಾರೆ.
ಮತದಾನಕ್ಕೆ ಬಂದ ವ್ಯಕ್ತಿಯನ್ನೇ ಗುಂಡಿಟ್ಟು ಕೊಂದ ದುಷ್ಕರ್ಮಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ