ಗೋಕಾಕ, ಮೂಡಲಗಿ, ಬೆಳಗಾವಿ ನಗರದಲ್ಲಿ ಪ್ರಚಾರ ಸಭೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಲೋಕಸಭಾ ಕ್ಷೇತ್ರವನ್ನು ಕಳೆದುಕೊಳ್ಳುವ ಆತಂಕದಲ್ಲಿರುವ ಭಾರತೀಯ ಜನತಾ ಪಾರ್ಟಿ ಈಗ ಗೋಕಾಕ ಮತ್ತು ಅರಬಾವಿ ಕ್ಷೇತ್ರದ ಮೇಲೆ ಹೆಚ್ಚಿನ ಗಮನ ಕೇಂದ್ರೀಕರಿಸಿದೆ.
ಗೋಕಾಕ ಮತ್ತು ಅರಬಾವಿ ಕ್ಷೇತ್ರದಲ್ಲಿ ಜಾರಕಿಹೊಳಿ ಕುಟುಂಬದ ಮತಗಳು ಹೆಚ್ಚಿದ್ದು, ಆ ಮತಗಳು ಸತೀಶ್ ಜಾರಕಿಹೊಳಿಗೆ ಹೋದಲ್ಲಿ ಬಿಜೆಪಿ ಬೆಳಗಾವಿ ಕ್ಷೇತ್ರವನ್ನು ಕಳೆದುಕೊಳ್ಳುವ ಆತಂಕ ಉಂಟಾಗಿದೆ. ರಮೇಶ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿ ಯಾರ ಪರವಾಗಿ ಕೆಲಸ ಮಾಡಲಿದ್ದಾರೆ ಎನ್ನುವ ಪ್ರಶ್ನೆಗೆ ಸೋಮವಾರದವರೆಗೂ ಉತ್ತರ ಸಿಕ್ಕಿರಲಿಲ್ಲ. ಸೋಮವಾರ ಬಾಲಚಂದ್ರ ಜಾರಕಿಹೊಳಿ ಗೋಕಾಕಕ್ಕೆ ಆಗಮಿಸಿ ಮಂಗಲಾ ಅಂಗಡಿಗೆ ಬೆಂಬಲ ಎಂದು ಘೋಷಿಸಿದರು.
ಆದಾಗ್ಯೂ ಬಿಜೆಪಿ ನಾಯಕರಿಗೆ ನಂಬಿಕೆ ಬಂದಂತೆ ಕಾಣುತ್ತಿಲ್ಲ. ಈ ಎರಡೂ ಕ್ಷೇತ್ರದ ಮತಗಳು ಸತೀಶ್ ಜಾರಕಿಹೊಳಿಗೆ ಹೋದರೆ ಸಂಕಷ್ಟ ಎದುರಾಗಲಿದೆ ಎಂದು ಮನಗಂಡು ಬುಧವಾರ ಮುಖ್ಯಮಂತ್ರಿಗಳ ಸಭೆ ಆಯೋಜಿಸಿದ್ದಾರೆ. ಯಡಿಯೂರಪ್ಪ ಬುಧವಾರ ಬೆಳಗ್ಗೆ ಮೂಡಲಗಿಯಲ್ಲಿ ಮತ್ತು ಸಂಜೆ ಗೋಕಾಕದಲ್ಲಿ ಸಾರ್ವಜನಿಕ ಸಭೆ ನಡೆಸಲಿದ್ದಾರೆ.
ಏ.15ರಂದು ಯಡಿಯೂರಪ್ಪ ಬೆಳಗಾವಿ ನಗರದಲ್ಲಿ 2 ಸಭೆಗಳನ್ನು ನಡೆಸಲಿದ್ದಾರೆ. ಅಂದೇ ಬಹಿರಂಗ ಪ್ರಚಾರಕ್ಕೆ ತರೆ ಬೀಳಲಿದೆ.
ಬಾಲಚಂದ್ರ ಜಾರಕಿಹೊಳಿ ಕನ್ಪ್ಯೂಸ್ ಮಾಡ್ಕೋಬೇಡಿ, ತಪ್ಪು ದಾರಿ ಹಿಡಿಬೇಡಿ ಎಂದಿದ್ದು ಯಾರಿಗೆ? ಏಕೆ?
ಉಪಚುನಾವಣಾ ಅಖಾಡಕ್ಕೆ ದುಮುಕಿದ ಬಾಲಚಂದ್ರ ಜಾರಕಿಹೊಳಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ