Latest

ಲಾಕ್ ಡೌನ್ ಬಗ್ಗೆ ಗೃಹ ಸಚಿವರಿಂದ ಸ್ಪಷ್ಟನೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಜಾರಿಯಾಗಲಿದೆ ಎಂಬ ಸುದ್ದಿ ಹರಡುತ್ತಿದೆ. ಈ ಹಿನ್ನೆಲೆಯಲ್ಲಿ ಸ್ಪಷ್ಟನೆ ನಿಡಿರುವ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಸಧ್ಯದ ಪರಿಸ್ಥಿತಿಯಲ್ಲಿ ರಾಜ್ಯದಲ್ಲಿ ಲಾಕ್ ಡೌನ್ ಜಾರಿ ಇಲ್ಲ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್ ಡೌನ್ ಬಗ್ಗೆ ಸರ್ಕಾರಕ್ಕೆ ಸ್ಪಷ್ಟತೆ ಇದೆ. ಲಾಕ್ ಡೌನ್ ಇಲ್ಲದೆಯೇ ಕೊರೊನಾ ನಿಯಂತ್ರಿಸಲು ಕಠಿಣ ಕ್ರಮಗಳನ್ನು ಕೈಗೊಳ್ಳುತ್ತೇವೆ. ಅನಗತ್ಯ ಸುದ್ದಿ ಹರಡಿ ಆತಂಕ ಸೃಷ್ಟಿಸುವುದು ಬೇಡ. ಸುಳ್ಳು, ಊಹಾಪೋಹದ ಸುದ್ದಿ ಹರಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

Home add -Advt

ಉಪಚುನಾವಣೆ ಮುಗಿದ ಬಳಿಕ ಸಿಎಂ ಯಡಿಯೂರಪ್ಪ ಸರ್ವಪಕ್ಷ ಸಭೆ ಕರೆದಿದ್ದಾರೆ. ಈ ವೇಳೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು.

Related Articles

Back to top button