ಪ್ರಗತಿವಾಹಿನಿ ಸುದ್ದಿ; ದಾವಣಗೆರೆ: ಚುನಾವಣಾ ಪ್ರಚಾರಕ್ಕೆಂದು ತೆರಳುತ್ತಿದ್ದ ವೇಳೆ ಮಾಜಿ ಸಚಿವ ಯು.ಟಿ.ಖಾದರ್ ಪ್ರಯಾಣಿಸುತ್ತಿದ್ದ ಕಾರು ಹಾಗೂ ಕಂಟೇನರ್ ನಡುವೆ ಭೀಕರ ಅಪಘಾತ ಸಂಭವಿಸಿರುವ ಘಟಣೆ ದಾವಣಗೆರೆ ಜಿಲ್ಲೆ ಆನುಗೋಡು ಬಳಿ ನಡೆದಿದೆ.
ಮುಂದೆ ಚಲಿಸುತ್ತಿದ್ದ ಕಂಟೇನರ್ ಗೆ ವೇಗವಾಗಿ ಬಂದ ಮಾಜಿ ಸಚಿವರ ಕಾರು ಹಿಂದಿನಿಂದ ಗುದ್ದಿದೆ. ಕಾರು ನುಜ್ಜುಗುಜ್ಜಾಗಿದ್ದು, ಅದೃಷ್ಟವಶಾತ್ ಯು.ಟಿ.ಖಾದರ್ ಅಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಎಸ್.ಪಿ.ಹನುಮಂತರಾಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಳಗಾವಿ ಉಪಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರಕ್ಕೆಂದು ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.
ಜೀವನ್ ಸಾಥಿ ಆಗುತ್ತೇನೆಂದು 10 ಲಕ್ಷ ರೂ ಪಡೆದ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ