ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಸಿಬಿಎಸ್ಇ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ಆದೇಶ ಹೊರಡಿಸಿದ್ದು, 10ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದ್ದು, 12ನೇ ತರಗತಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ದೇಶಾದ್ಯಂತ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿಪಕ್ಷಗಳು ಸಿಬಿಎಸ್ಇ ಪರೀಕ್ಷೆ ಮುಂದೂಡುವಂತೆ ಒತ್ತಾಯಿಸಿದ್ದವು. ಅಲ್ಲದೇ ಈ ಬಗ್ಗೆ 2 ಲಕ್ಷಕ್ಕೂ ಹೆಚ್ಚು ಅರ್ಜಿ ಸಲ್ಲಿಕೆಯಾಗಿದ್ದವು. ಈ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ಮೋದಿ ನೇತೃತ್ವದಲ್ಲಿ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೊಖ್ರಿಯಾಲ್, ಸಿಬಿಎಸ್ಇ ಬೋರ್ಡ್ ಅಧಿಕಾರಿಗಳ ಜೊತೆ ಸಭೆ ನಡೆಸಲಾಗಿದ್ದು, ಸಭೆಯಲ್ಲಿ ಮಹತ್ವದ ನಿರ್ಧಾರ ಪ್ರಕಟಿಸಲಾಗಿದೆ.
ದೇಶದ ಎಲ್ಲಾ ಭಾಗಗಳಿಗೂ ತಂತ್ರಜ್ನಾದ ಸೌಲಭ್ಯ ಸಮರ್ಪಕವಾಗಿ ತಲುಪುತ್ತಿಲ್ಲವಾದ್ದರಿಂದ ಆನ್ ಲೈನ್ ನಲ್ಲಿ ಪರೀಕ್ಷೆ ನಡೆಸುವುದು ಕೂಡ ಕಷ್ಟಕರವಾಗಿದೆ ಎಂಬ ಅಭಿಪ್ರಾಯ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸಿಬಿಎಸ್ಇ 10ನೇ ತರಗತಿ ಪರೀಕ್ಷೆ ರದ್ದು ಮಾಡಲಾಗಿದ್ದು, 12ನೇ ತರಗತಿ ಪರೀಕ್ಷೆಯನ್ನು ಮುಂದೂಡಿ ಆದೇಶ ಹೊರಡಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ