ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕೊರೊನಾ ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಸರ್ವ ಪಕ್ಷ ಸಭೆ ಬಳಿಕ ಕಠಿಣ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ನಿರ್ಧರಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಮಾತನಡಿದ ಸಿಎಂ ಬಿ.ಎಸ್.ಯಡಿಯೂರಪ್ಪ. ಕೊರೊನಾ ಎರಡನೇ ಅಲೆ ನಿಯಂತ್ರಿಸುವ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ 10 ಹೊಸ ಕೋವಿಡ್ ಸೆಂಟರ್ ಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ. 1,500 ಬೆಡ್ ಗಳ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಹೇಳಿದರು.
ಸೋಂಕು ನಿಯಂತ್ರಣಕ್ಕೆ ಜನರು ಸಹಕಾರ ನೀಡಬೇಕು. ಮಾಸ್ಕ್, ಸಾಮಾಜಿಕ, ದೈಹಿಕ ಅಂತರಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದರು.
ಬೆಲೆ ಏರಿಕೆ ನಮ್ಮನ್ನು ಯಾರೂ ಪ್ರಶ್ನಿಸಿಲ್ಲ ಎಂದ ಸಚಿವ ಶೆಟ್ಟರ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ