Latest

ಲಾಕ್ ಡೌನ್ ಬಗ್ಗೆ ಮತ್ತೊಮ್ಮೆ ಸ್ಪಷ್ಟನೆ ನೀಡಿದ ಗೃಹ ಸಚಿವ

ಪ್ರಗತಿವಾಹಿನಿ ಸುದ್ದಿ; ಹುಮ್ನಾಬಾದ್: ಕೊರೋನಾ ಎರಡನೇ ಅಲೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಲಾಕ್ ಡೌನ್ ಜಾರಿಗೊಳಿಸುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.

ಹುಮ್ನಾಬಾದ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್ ಡೌನ್ ಇಲ್ಲದೆ ಕೊರೊನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಹೆಚ್ಚು ಆದ್ಯತೆ ನೀಡುತ್ತಿದೆ. ಇದಕ್ಕೆ ಜನರ ಸಹಕಾರ ಬೇಕು ಎಂದರು.

ಕಳೆದ ಬಾರಿ ಕೊರೊನಾ ಬಂದಾಗ ಏನಾಗಿತ್ತು ಎಂಬುದರ ಅರಿವು, ಅನುಭವ ನಮಗಿದೆ. ಅದರ ಆಧಾರದ ಮೇಲೆ ಲಾಕ್ ಡೌನ್ ಜಾರಿಗೊಳಿಸದೆ ನಿಯಂತ್ರಣಕ್ಕೆ ನಾವು ಮೊದಲ ಆದ್ಯತೆ ನೀಡುತ್ತಿದ್ದೇವೆ. ಅದಕ್ಕಾಗಿಯೇ ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದನ್ನು ಕಡ್ಡಾಯ ಗೊಳಿಸಲಾಗಿದೆ. ಇದರ ಜೊತೆಗೆ ಹಲವಾರು ಕಟ್ಟುನಿಟ್ಟಿನ ನಿಯಂತ್ರಣ ಕ್ರಮಗಳನ್ನು ಜಾರಿಗೆ ಸೂಚನೆ ನೀಡಲಾಗಿದೆ. ಸಾರ್ವಜನಿಕರು ಸಹಕರಿಸಿದರೆ ಕೊರೊನಾ ತಡೆಗಟ್ಟುವುದು ಸಾಧ್ಯ. ಇದಕ್ಕೆ ಜನರ ಸಂಪೂರ್ಣ ಸಹಕಾರವನ್ನು ಕೋರುತ್ತೇನೆ ಎಂದರು.

ಸದ್ಯಕ್ಕೆ ರಾಜ್ಯದಲ್ಲಿ ಲಾಕ್ ಡೌನ್ ಹೇರಿಕೆ ಬಗ್ಗೆ ಎದ್ದಿರುವ ಊಹಾಪೋಹಗಳಿಗೆ ಯಾರು ಕಿವಿ ಕೊಡಬಾರದು. ಇದು ನನ್ನ ಮನವಿ. ವಾರಾಂತ್ಯದಲ್ಲಿ ಲಾಕ್ ಡೌನ್ ಅಥವಾ ಇನ್ನಿತರ ಕಟ್ಟುನಿಟ್ಟಿನ ಕ್ರಮಗಳ ಕುರಿತು ಪರಿಸ್ಥಿತಿಯನ್ನು ಆಧರಿಸಿ ನಿರ್ಧಾರ ಮಾಡುತ್ತೇವೆ ಎಂದು ಹೇಳಿದರು.
ರೆಮಿಡೆಸಿವಿರ್ ಔಷಧ ದುರ್ಬಳಕೆ ಮಾಡಿದರೆ ಹುಷಾರ್

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button