Latest

ಕೊರೊನಾ ಸುಳಿಯಲ್ಲಿ ಸಿಲುಕಿದ ಸಿಎಂ ಫ್ಯಾಮಿಲಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನಿನ್ನೆಯಷ್ಟೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಕೊರೊನಾ ಸೋಂಕು ದೃಢಪಟ್ಟ ಬೆನ್ನಲ್ಲೇ ಇದೀಗ ಸಿಎಂ ಕುಟುಂಬ ಸದಸ್ಯರಿಗೂ ಕೊರೊನಾ ಪಾಸಿಟಿವ್ ಬಂದಿದೆ.

ಸಿಎಂ ಹಿರಿಯ ಪುತ್ರಿ, ಮೊಮ್ಮಗಳು, ಅಳಿಯ ಸೇರಿದಂತೆ ಸಿಎಂ ಕುಟುಂಬದ ಹಲವರಲ್ಲಿ ಸೋಂಕು ಪತ್ತೆಯಾಗಿದ್ದು, ಕೊರೊನಾ ವೈರಸ್ ಸುಳಿಗೆ ಸಿಎಂ ಫ್ಯಾಮಿಲಿ ಸಿಲುಕಿದೆ.

ಸಿಎಂ ಯಡಿಯೂರಪ್ಪ ಹಿರಿಯ ಪುತ್ರಿ ಪದ್ಮಾವತಿ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಈಗಾಗಲೇ ಕೆಲ ದಿನಗಳ ಹಿಂದೆ ಪದ್ಮಾವತಿ ಅವರ ಮಗಳು ಡಾ.ಸೌಂದರ್ಯ ಹಾಗೂ ಅವರ ಪತಿ ಡಾ.ನಿರಂಜನ್ ಅವರಿಗೆ ಕೊರೊನಾ ಸೋಂಕು ತಗುಲಿತ್ತು ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ಸಿಎಂ ಹಾಗೂ ಅವರ ಪುತ್ರಿ ಸೇರಿದಂತೆ ಹಲವರಲ್ಲಿ ಸೋಂಕು ದೃಢಪಟ್ಟಿದೆ.

ಸಿಎಂ ಕುಟುಂಬದವರನ್ನು ಮಣಿಪಾಲ್ ಆಸ್ಪತ್ರೆಯ ಒಂದೇ ವಾರ್ಡ್ ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಕೊರೊನಾ ಸೋಂಕು

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button