ಪ್ರಗತಿವಾಹಿನಿ ಸುದ್ದಿ; ಪಾಟ್ನಾ: ಬಹುಕೋಟಿ ಮೇವು ಹಗರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ್ದ ಬಿಹಾರ ಮಾಜಿ ಸಿಎಂ, ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಗೆ ಜಾರ್ಖಂಡ್ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ.
ಮೇವು ಹಗರಣಕ್ಕೆ ಸಂಬಂಧಿಸಿದಂತೆ ಲಾಲೂ ಪ್ರಸಾದ್ ಯಾದವ್ 2017 ಡಿಸೆಂಬರ್ ನಿಂದ ಜೈಲಿನಲ್ಲಿದ್ದು, ಇದೀಗ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. 1 ಲಕ್ಷ ವೈಯಕ್ತಿಕ ಬಾಂಡ್, ವಿಳಾಸ, ಮೊಬೈಲ್ ನಂಬರ್ ದಲಾವಣೆ ಮಾಡದಂತೆ ಹಾಗೂ ದೇಶ ಬಿಟ್ಟು ಹೋಗದಂತೆ ಸೂಚಿಸಿದೆ.
ಮೇವು ಹಗರಣಕ್ಕೆ ಸಂಬಂಧಿಸಿದ ಚೈಬಾಸಾ ಹಗರಣ ಹಾಗೂ ದುಮ್ಕಾ ಖಜಾನೆ ಹಗರಣದಡಿ ಸಿಬಿಐ ಲಾಲೂ ಪ್ರಸಾದ್ ಯಾದವ್ ವಿರುದ್ಧ ಪ್ರಕರಣ ದಾಖಲಿಸಿತ್ತು. ಆದರೆ 2020ರ ಅಕ್ಟೋಬರ್ ನಲ್ಲಿ ಚೈಬಾಸಾ ಕೇಸ್ ನಲ್ಲಿ ಜಾರ್ಖಂಡ್ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಆದರೆ ದುಮ್ಕಾ ಕೇಸ್ ನಲ್ಲಿ ಜಾಮೀನು ಸಿಗದ ಕಾರಣ ಜೈಲಿನಲ್ಲಿಯೇ ಕಾಲಕಳೆದಿದ್ದರು.
ಇದೀಗ ಈ ಪ್ರಕರಣದಲ್ಲೂ ಲಾಲೂ ಪ್ರಸಾದ್ ಯಾದವ್ ಗೆ ಜಾಮೀನು ಮಂಜೂರಾಗಿರುವುದರಿಂದ ಶೀಘ್ರದಲ್ಲಿಯೇ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ