ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಎರಡನೇ ಅಲೆ ಅಟ್ಟಹಾಸ ಹೆಚ್ಚುತ್ತಿರುವ ನಡುವೆ ರಾಜ್ಯ ಸರ್ಕಾರ ಗಂಭೀರ ಪ್ರಕರಣವೊಂದನ್ನು ಮುಚ್ಚಿ ಹಾಕುವ ಹುನ್ನಾರ ನಡೆಸಿದೆ ಎಂದು ಕಾಂಗ್ರೆಸ್ ಕಿಡಿಕಾರಿದೆ.
ರಾಜ್ಯ ರಾಜಕೀಯದಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿಸಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣವನ್ನು ರಾಜ್ಯ ಸರ್ಕಾರ ಮುಚ್ಚಿ ಹಾಕಲು ಯತ್ನಿಸಿದೆ. ಪ್ರಕರಣದ ತನಿಖೆಗೆ ರಚನೆಯಾಗಿದ್ದ ಎಸ್ಐಟಿ ಆರೋಪಿ ರಕ್ಷಣೆ ಮಾಡುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಿದ್ದರೂ ರಮೇಶ್ ಜಾರಕಿಹೊಳಿ ಕೊರೊನಾ ಕಾರಣ ಹೇಳಿ ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾಗುತ್ತಿಲ್ಲ. ಕೊರೊನಾ ನೆಗೆಟಿವ್ ಬಂದಿದ್ದರೂ ಹೋಂ ಐಸೋಲೇಷನ್ ಆಗಿರುವ ಮಾಜಿ ಸಚಿವರು, ನಿನ್ನೆಯೂ ವಿಚಾರಣೆಗೆ ಗೈರಾಗಿದ್ದಾರೆ. ಆರೋಗ್ಯ ಚೇತರಿಸಿಕೊಳ್ಳದ ಕಾರಣ ವೈದ್ಯರ ಸಲಹೆ ಮೇರೆಗೆ ಮನೆಯಲ್ಲಿಯೇ ಐಸೋಲೇಷನ್ ಆಗಿದ್ದಾರೆ ಎನ್ನಲಾಗುತ್ತಿದೆ. ಇದರ ಬೆನ್ನಲ್ಲೇ ಟ್ವಿಟರ್ ನಲ್ಲಿ ಕಿಡಿಕಾರಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.
ಅತ್ಯಾಚಾರ ಆರೋಪಿ ತಲೆ ಮರೆಸಿಕೊಂಡಿದ್ದಾರೆಯೇ? ಬಂಧನವೂ ಆಗಿಲ್ಲ, ವಿಚಾರಣೆಗೂ ಬಂದಿಲ್ಲ. ಗೃಹ ಸಚಿವ ಬಸವರಾಜ್ ಬೊಮ್ಮಾಯಿಯವರೇ ಆರೋಪಿ ರಕ್ಷಣೆಗಾಗಿ ಎಸ್ಐಟಿ ರಚಿಸಿದ್ದಾಗಿ ಬಹಿರಂಗವಾಗಿ ಒಪ್ಪಿಕೊಂಡುಬಿಡಿ. ಕರೋನಾ ಸಂಕಟದ ನಡುವೆ ಗಂಭೀರ ಪ್ರಕರಣವೊಂದನ್ನು ಮುಚ್ಚಿ ಹಾಕುವ ನಿಮ್ಮ ಹುನ್ನಾರ ಜನತೆಗೆ ತಿಳಿದಿದೆ ಎಂದು ಗುಡುಗಿದೆ.
ಮೇ 1ರಿಂದ ಕೋವಿಡ್ ಲಸಿಕೆ ದರ ಹೆಚ್ಚಳ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ