Latest

ಯಡಿಯೂರಪ್ಪ ಆಸ್ಪತ್ರೆಯಿಂದ ಡಿಸ್ಚಾರ್ಜ್ : ಜನತೆಗೆ ಸಿಎಂ ವಿಶೇಷ ಮನವಿ

Home add -Advt

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಸೋಂಕಿನಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಸಿಎಂ ಯಡಿಯೂರಪ್ಪನವರಿಗೆ ಎರಡನೇ ಬಾರಿ ಕೊರೊನಾ ಸೋಂಕು ತಗುಲಿತ್ತು. ಏಪ್ರಿಲ್ 16ರಂದು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಸೂಕ್ತ ಚಿಕಿತ್ಸೆ ಬಳಿಕ ಇದೀಗ ಗುಣಮುಖರಾಗಿರುವ ಮುಖ್ಯಮಂತ್ರಿಗಳಿಗೆ ಕೋವಿಡ್ ನೆಗೆಟಿವ್ ಬಂದಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ರಾಜ್ಯದಲ್ಲಿ ಕೊರೊನಾ ಸ್ಥಿತಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ರಾಜ್ಯದ ಜನರು ಅನಗತ್ಯವಾಗಿ ಮನೆಯಿಂದ ಹೊರಗೆ ಬರಬೇಡಿ. ಸೋಂಕು ನಿಯಂತ್ರಣಕ್ಕೆ ಸರ್ಕಾರ ಕಠಿಣ ಕ್ರಮಗಳನ್ನು ಜಾರಿ ಮಾಡಿದೆ. ಜನರು ಸರ್ಕಾರದ ನಿಯಮವನ್ನು ಪಾಲನೆ ಮಾಡಿ. ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ದೈಹಿಕ ಅಂತರವನ್ನು ಕಾಪಾಡಿ ಎಂದು ಮನವಿ ಮಾಡಿದರು.

ವಿಶ್ವದಲ್ಲೇ ಅತ್ಯಧಿಕ ಕೊರೊನಾ ಸೋಂಕು ಭಾರತದಲ್ಲಿ ಪತ್ತೆ

Related Articles

Back to top button