ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ನಿಯಂತ್ರಣಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಸಚಿವರುಗಳ ವರ್ಚುವಲ್ ಸಭೆ ನಡೆದಿದ್ದು, ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಯಿತು.
ಸಭೆಯ ಮುಖ್ಯಾಂಶಗಳು:
1. ನಗರದಲ್ಲಿ ಈಗಾಗಲೇ ಆಕ್ಸಿಜನ್ ಪೂರೈಕೆ ಮತ್ತು ಔಷಧ ಕೊರತೆಯ ಸಮಸ್ಯೆಯನ್ನು ಬಗೆಹರಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಮಾಹಿತಿ ನೀಡಿದರು.
2. ಜೊತೆಗೆ ಲಸಿಕೆಗಳ ಕೊರತೆಯೂ ಇಲ್ಲ ಎಂದು ಸ್ಪಷ್ಟ ಪಡಿಸಿದರು.
3. ನಗರದಲ್ಲಿ ಫೀವರ್ ಕ್ಲಿನಿಕ್ ಗಳನ್ನು ಬಲಪಡಿಸಿ, ಜ್ವರ, ಮತ್ತಿತರ ಲಕ್ಷಣ ಹೊಂದಿರುವವರ ಪರೀಕ್ಷೆ ಹಾಗೂ ಸೂಕ್ತ ಮಾರ್ಗದರ್ಶನ ನೀಡಲು ತೀರ್ಮಾನಿಸಲಾಯಿತು. ಇದರಿಂದ ಅಗತ್ಯವಿರುವವರಿಗೆ ಮಾತ್ರ ಆಸ್ಪತ್ರೆಗೆ ದಾಖಲಿಸಲು ಸಾಧ್ಯವಾಗುತ್ತದೆ.
4. ಸಹಾಯವಾಣಿಗಳನ್ನು ಇನ್ನಷ್ಟು ಬಲಪಡಿಸಿ, ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವಂತೆ ಸೂಚಿಸಿದರು.
5. ಹೋಮ್ ಐಸೋಲೇಷನ್ ನಲ್ಲಿ ಇರುವವರ ಚಿಕಿತ್ಸೆ, ಟೆಲಿ ಕನ್ಸಲ್ಟೇಷನ್ ಒದಗಿಸಲು ಹಾಗೂ ಅವರ ಮೇಲೆ ನಿಗಾ ವಹಿಸಲು ಆದ್ಯತೆ ನೀಡುವಂತೆ ಸೂಚಿಸಿದರು.
6. ಖಾಸಗಿ ಆಸ್ಪತ್ರೆಗಳು ಕೋವಿಡ್ ಚಿಕಿತ್ಸೆಗೆ ಬೆಡ್ ಗಳನ್ನು ಒದಗಿಸುವುದನ್ನು ಖಾತರಿ ಪಡಿಸಬೇಕು. ಆಯಾ ವಲಯಗಳ ಡಿಸಿಪಿಗಳು ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲಿಸುವಂತೆ ಸೂಚಿಸಲಾಯಿತು.
7. ನೋಡಲ್ ಅಧಿಕಾರಿಗಳು ಆಯಾ ವಲಯದ ಕೋವಿಡ್ ನಿರ್ವಹಣೆಗೆ ಸಂಪೂರ್ಣ ಜವಾಬ್ದಾರರು. ಅವರು ಎಲ್ಲ ಸಮಸ್ಯೆಗಳ ಕುರಿತೂ ಸ್ಪಂದಿಸಬೇಕು.
8. ಆರೋಗ್ಯ ಸೇವೆಯಲ್ಲಿ ನಿರತರಾಗಿರುವ ವೈದ್ಯಕೀಯ, ಅರೆ ವೈದ್ಯಕೀಯ ಸಿಬ್ಬಂದಿಗೆ ಸ್ಥೈರ್ಯ ತುಂಬುವಂತೆ ಸೂಚಿಸಿದರು.
9. ಚಿತಾಗಾರಗಳಿಗೆ ಶವ ಸಾಗಿಸುವ ಅಂಬ್ಯುಲೆನ್ಸ್ ಗಳು ತಾಸುಗಟ್ಟಲೆ ಸರದಿಯಲ್ಲಿ ನಿಲ್ಲುವುದರಿಂದ ಶವಗಳನ್ನು ಸಾಗಿಸಲು ಅಂಬ್ಯುಲೆನ್ಸ್ ಗಳ ಕೊರತೆ ಆಗಿರುವ ಹಿನ್ನೆಲೆಯಲ್ಲಿ ಶವಗಳನ್ನು ಇರಿಸಲು ಚಿತಾಗಾರಗಳಲ್ಲಿ ತಾತ್ಕಾಲಿಕ ವ್ಯವಸ್ಥೆ ಮಾಡಲು ಸೂಚಿಸಲಾಯಿತು.
10. ಕೋವಿಡ್ ನಿರ್ವಹಣೆಯಲ್ಲಿ ಸಾಧ್ಯವಿರುವಲ್ಲಿ ಸ್ವಯಂ ಸೇವಕರ ನೆರವು ಪಡೆಯಲು ಸಭೆಯಲ್ಲಿ ನಿರ್ಧರಿಸಲಾಯಿತು.
ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ, ಸಚಿವರಾದ ಆರ್. ಅಶೋಕ್, ಡಾ. ಕೆ. ಸುಧಾಕರ್, ಎಸ್. ಸುರೇಶ್ ಕುಮಾರ್, ವಿ.ಸೋಮಣ್ಣ, ಎಂ.ಟಿ. ಬಿ. ನಾಗರಾಜ್, ಎಸ್.ಟಿ.ಸೋಮಶೇಖರ್, ಕೆ. ಗೋಪಾಲಯ್ಯ, ಬಿಡಿಎ ಅಧ್ಯಕ್ಷ ಎಸ್.ಆರ್. ವಿಶ್ವನಾಥ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಆರೋಗ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ರಾಜ್ಯ ಸರ್ಕಾರದ ವಿರುದ್ಧ ಸಿ.ಟಿ.ರವಿ ಅಸಮಾಧಾನ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ