Kannada NewsLatest

ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆ ಇಲ್ಲ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಜಿಲ್ಲೆಯ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಯಾವುದೇ ಕಾರಣಕ್ಕೂ ಆಕ್ಸಿಜನ್ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ (ಏ.23) ನಡೆದ ಆರೋಗ್ಯ ಇಲಾಖೆಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸದ್ಯಕ್ಕೆ ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆ ಕಂಡುಬಂದಿಲ್ಲ. ಆದಾಗ್ಯೂ ತುರ್ತು ಪರಿಸ್ಥಿತಿ ನಿಭಾಯಿಸಲು ಅನುಕೂಲವಾಗುವಂತೆ ನಿರಂತರವಾಗಿ ಆಕ್ಸಿಜನ್ ಲಭ್ಯತೆ ಇರುವಂತೆ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.

ನಿಪ್ಪಾಣಿ ಹಾಗೂ ಬೆಳಗಾವಿಯಲ್ಲಿರುವ ಆಕ್ಸಿಜನ್ ಸರಬರಾಜುದಾರರ ಬಳಿ ಇರುವ ಆಕ್ಸಿಜನ್ ಕಡ್ಡಾಯವಾಗಿ ಮೊದಲು ಜಿಲ್ಲೆಯ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಪೂರೈಸಬೇಕು. ಅದೇ ರೀತಿ ಕೊಲ್ಲಾಪುರ ಮತ್ತು ಬಳ್ಳಾರಿಯಿಂದ ಇದುವರೆಗೆ ಪಡೆಯಲಾಗುತ್ತಿದ್ದ ಆಕ್ಸಿಜನ್ ಅನ್ನು ಕೂಡ ಯಥಾಪ್ರಕಾರ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ತಿಳಿಸಿದರು.

ಸಹಾಯಕ ಔಷಧ ನಿಯಂತ್ರಕರಾದ ರಘುರಾಮ್ ಅವರು, ಜಿಲ್ಲೆಯಲ್ಲಿ ಆಕ್ಸಿಜನ್ ಲಭ್ಯತೆಯ ಕುರಿತು ಮಾಹಿತಿಯನ್ನು ನೀಡಿದರು.

ಬೆಳಗಾವಿ ನಗರ ಪೊಲೀಸ್ ಆಯುಕ್ತರಾದ ಡಾ.ಕೆ.ತ್ಯಾಗರಾಜನ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ಎಚ್.ವಿ., ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಅಪರ ಜಿಲ್ಲಾಧಿಕಾರಿ ಯೋಗೇಶ್ವರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ವಿ.ಮುನ್ಯಾಳ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.

ಗೋಕಾಕ್, ಅರಬಾವಿಯಲ್ಲಿ ಮಧ್ಯಾಹ್ನ 1 ಗಂಟೆಯವರೆಗೆ ವ್ಯಾಪಾರ -ಶಾಸಕ ಬಾಲಚಂದ್ರ ಜಾರಕಿಹೊಳಿ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button