ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಜಾರಿಗೆ ತಂದಿರುವ ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸಂಪೂರ್ಣ ಬಂದ್ ವಾತಾವರಣ ನಿರ್ಮಾಣವಾಗಿದೆ.
ರಾತ್ರಿ 9ಗಂಟೆಯಿಂದ ಜಾರಿಯಲ್ಲಿರುವ ವೀಕೆಂಡ್ ಕರ್ಫ್ಯೂ ಸೋಮವಾರ ಬೆಳಿಗ್ಗೆ 6 ಗಂಟೆಯವರೆಗೆ ಇರಲಿದೆ. ಇದೀಗ ಅಗತ್ಯ ವಸ್ತುಗಳ ಖರೀದಿಗಾಗಿ ಬೆಳಿಗ್ಗೆ 6ರಿಂದ 10ಗಂಟೆಯವರೆಗೆ ನೀಡಿದ್ದ ಸಮಯ ಮುಗಿದಿದ್ದು, ದಿನಸಿ, ತರಕಾರಿ ಅಂಗಡಿಗಳನ್ನು ಪೊಲೀಸರು ಮುಚ್ಚಿಸುತ್ತಿದ್ದಾರೆ.
ಮನೆಯಿಂದ ಯಾರೊಬ್ಬರು ಹೊರಬರದಂತೆ ಎಚ್ಚರಿಕೆ ನಿದಲಾಗಿದೆ. ಅನಗತ್ಯವಾಗಿ ಜನರು ಓಡಾಟ ನಡೆಸಿದರೆ ಲಾಠಿ ಚಾರ್ಜ್ ಮಾಡಲಾಗುತ್ತಿದ್ದು, ವಾಹನಗಳನ್ನು ಸೀಜ್ ಮಾಡುವುದಾಗಿ ಪೊಲೀಸರು ಖಡಕ್ ವಾರ್ನಿಂಗ್ ನೀಡಿದ್ದಾರೆ.
ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಅಂತರಾಜ್ಯ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ಕೂಡ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಕೆ ಎಸ್ ಆರ್ ಟಿಸಿ ಬಸ್ ಸಂಚಾರ ಕೂಡ 10ಗಂಟೆಯ ಬಳಿಕ ಬಹುತೇಕ ಬಂದ್ ಆಗಿದೆ.
ಆಕ್ಸಿಜನ್ ಸಿಲಿಂಡರ್ ಅಕ್ರಮ ಸಂಗ್ರಹ; ವ್ಯಕ್ತಿ ಬಂಧನ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ