ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಇಲ್ಲಿಯ ಕಣಬರ್ಗಿಯಲ್ಲಿ ವೀಕ್ ಎಂಡ್ ಕರ್ಫ್ಯೂ ನಡುವೆಯೂ ಪ್ರತಿಷ್ಠಿತ ಕುಟುಂಬಗಳೆರಡರ ವಿವಾಹ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯುತ್ತಿದೆ.
ಬೆಳಗ್ಗೆ 10.4ರ ವೇಳೆಯಲ್ಲಿ ಕಣಬರ್ಗಿಯಲ್ಲಿ ಮದುವೆಯ ಮೆರವಣಿಗೆ ಬ್ಯಾಂಡ್ ಸೆಟ್ ಹಾಕಿ ಅದ್ದೂರಿಯಾಗಿ ಈಗ ನಡೆಯಿತು. ಕರ್ಫ್ಯೂಗೂ ಇದಕ್ಕೂ ಯಾವುದೇ ಸಂಬಂಧವೇ ಇಲ್ಲವೇನೋ ಎನ್ನುವ ರೀತಿಯಲ್ಲಿ ಮೆರವಣಿಗೆ ಸಾಗಿದೆ. ಮಹಿಳೆಯರೂ ಹೆಚ್ಚಿನ ಸಂಖ್ಯೆಯಲ್ಲಿ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.
ಉಳಿದಂತೆ ನಗರದಲ್ಲಿ ಪೊಲೀಸರು ಜನರ ಅನಗತ್ಯ ಓಡಾಟಕ್ಕೆ ಕಡಿವಾಣ ಹಾಕಲು ಇನ್ನಿಲ್ಲದ ಪ್ರಯತ್ನ ನಡೆಸಿದ್ದಾರೆ.
ಬೆಳಗಾವಿ ನಗರ ಹಾಗೂ ಜಿಲ್ಲೆಯ ಬಹುತೇಕ ಪ್ರದೇಶಗಳಲ್ಲಿ ಕರ್ಫ್ಯೂ ರೂಲ್ಸ್ ಜಾರಿಯಾಗುತ್ತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ