
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಸೋಂಕು ಹೆಚ್ಚುತ್ತಿದ್ದಂತೆ ಲಸಿಕೆ ಕಳ್ಳತನ, ಔಷಧಗಳ ಕಾಳಸಂತೆ ಮಾರಾಟ ಪ್ರಕರಣವೂ ಹೆಚ್ಚುತ್ತಿದೆ. ಕೊರೊನಾ ಸೋಂಕಿಗೆ ಪರಿಣಾಮಕಾರಿ ಔಷಧ ರೆಮ್ ಡಿಸಿವಿರ್ ಇಂಜಕ್ಷನ್ ನ್ನು ಅಕ್ರಮವಾಗಿ ಮಾರಾಟಮಾಡುತ್ತಿದ್ದ ಔಷಧ ಅಂಗಡಿ ಸಿಬ್ಬಂದಿ ಸೇರಿ 16 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಕೊರೊನಾ ಸೋಂಕಿತರ ಚಿಕಿತ್ಸೆಗೆ ರೆಮ್ ಡಿಸಿವಿರ್ ಚುಚ್ಚುಮದ್ದನ್ನು ಬಳಸಲಾಗುತ್ತದೆ. ಆದರೆ ಈ ಔಷಧಗಳು ಇದೀಗ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ಬ್ಬೃಹತ್ ಜಾಲವನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಮೆಡಿಕಲ್ ಸ್ಟೋರ್ ನಲ್ಲಿ ಕೆಲಸ ಮಾಡುತ್ತಿದ್ದ ಮೊಹಮ್ಮದ್ ಹುಜೆಫಾ, ಮತಿನ್ ಹಾಗೂ ಪ್ರಕಾಶ್, ಮೆಡಿಕಲ್ ಡಿಸ್ಟ್ರಿಬ್ಯೂಟರ್ ಸುಮನ್ ಸೇರಿದಂತೆ ಒಟ್ಟು 16 ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರು ಒಂದು ಇಂಜಕ್ಷನ್ ನ್ನು 10-11 ಸಾವಿರ ರೂಪಾಯಿಗಳಿಗೆ ಮಾರಾಟ ಮಾಡುತ್ತಿದ್ದು, ಬಂಧಿತರಿಂದ 55 ರೆಮ್ ಡಿಸಿವಿರ್ ಇಂಜಕ್ಷನ್ ವಶಕ್ಕೆ ಪಡೆದುಕೊಂಡಿದ್ದಾರೆ.
ಆರೋಗ್ಯ ಸಚಿವರ ಶಾಕಿಂಗ್ ಸ್ಟೇಟ್ ಮೆಂಟ್