ಪ್ರಗತಿವಾಹಿನಿ ಸುದ್ದಿ, ನಿಪ್ಪಾಣಿ – ಶನಿವಾರ ನಿಪ್ಪಾಣಿ ನಗರಸಭೆ ಕಾರ್ಯಾಲಯದಲ್ಲಿ, ತಾಲೂಕು ಮಟ್ಟದ ಅಧಿಕಾರಿಗಳು, ನಗರಸಭೆ , ಐ.ಎಮ್. ಎ, ರೋಟರಿ ಕ್ಲಬ್, ವಿವಿಧ ಸಂಘ ಸಂಸ್ಥೆಗಳ ಸದಸ್ಯರೊಂದಿಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಶಶಿಕಲಾ ಜೊಲ್ಲೆ ಹಾಗೂ ಚಿಕ್ಕೋಡಿ ಲೋಕಸಭೆ ಸಂಸದರಾದ ಅಣ್ಣಾಸಾಹೇಬ ಜೊಲ್ಲೆ ವಿಶೇಷ ಸಭೆ ನಡೆಸಿ, ಹೆಚ್ಚುವರಿ ಹಾಗೂ ವ್ಯಾಪಕವಾಗಿ ಕೊರೋನಾ ಲಸಿಕೆ ಚಟುವಟಿಕೆ ಹಮ್ಮಿಕೊಳ್ಳುವಂತೆ ಸೂಚಿಸಿದರು.
ಸಚಿವೆ ಶಶಿಕಲಾ ಜೊಲ್ಲೆ ಮಾತನಾಡಿ ಕೊರೋನಾ ಎರಡನೇ ಅಲೆ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ, 45 ವರ್ಷ ಮೇಲ್ಪಟ್ಟ ಎಲ್ಲರೂ ಕೋವಿಡ್ ಲಸಿಕೆಯನ್ನು ಹಾಕಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಇನ್ನೂ ಹೆಚ್ಚಿನ ಕಡೆಗಳಲ್ಲಿ ಲಸಿಕಾ ಅಭಿಯಾನವನ್ನು ಹಮ್ಮಿಕೊಂಡು, ಜನರಲ್ಲಿ ಜಾಗೃತಿ ಮೂಡಿಸಬೇಕು. ಸರ್ಕಾರದ ಕೋವಿಡ್ ಸುರಕ್ಷತಾ ನಿಯಮಗಳನ್ನು ಜನರು ತಪ್ಪದೇ ಪಾಲಿಸುವಂತೆ ಸೂಕ್ತ ರೀತಿಯಲ್ಲಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ತಹಶೀಲ್ದಾರರಾದ ಶ್ರೀ ಪ್ರಕಾಶ ಗಾಯಕವಾಡ, ವೈದ್ಯಾಧಿಕಾರಿ ಡಾ. ಸೀಮಾ ಗುಂಜಾಳ, ನಗರಸಭೆ ಅಧ್ಯಕ್ಷರಾದ ಜಯವಂತ ಭಾಟಲೆ ಉಪಾಧ್ಯಕ್ಷರಾದ ನೀತಾ ಬಾಗಡಿ,ಸದಸ್ಯರು, ಅಧಿಕಾರಿಗಳು, ರೋಟರಿ ಕ್ಲಬ್, ಐ.ಎಮ್. ಎ ಸದಸ್ಯರು, ಜನಪ್ರತಿನಿಧಿಗಳು, ವಿವಿಧ ಸಂಘ ಸಂಸ್ಥೆಗಳ ಸದಸ್ಯರು ಹಾಜರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ