Kannada NewsLatest

ಕೋವಿಡ್ ರೋಗಿಗಳ ಚಿಕಿತ್ಸೆ ನೋಂದಣಿಗೆ ಇಲ್ಲಿದೆ ಸುಲಭ ವಿಧಾನ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕೋವಿಡ್ ಸಾಂಕ್ರಾಮಿಕ ರೋಗ ದಿನ ದಿನಕ್ಕೂ ಉಲ್ಬಣಗೊಳ್ಳುತ್ತಿದೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಕೋವಿಡ್ ರೋಗಿಗಳಿಗೆ ಸೂಕ್ತ ಚಿಕಿತ್ಸೆ ಒದಗಿಸುವ ಉದ್ಧೇಶದಿಂದ ಜಿಲ್ಲೆಯಲ್ಲಿರುವ ಎಲ್ಲ ಖಾಸಗಿ ಆಸ್ಪತ್ರೆಗಳು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನೊಂದಿಗೆ ನೋಂದಾವಣೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಅವರು ಎಲ್ಲ ಖಾಸಗಿ ಆಸ್ಪತ್ರೆಗಳಿಗೆ ವಿನಂತಿಸಿಕೊಂಡಿದ್ದಾರೆ.

ಸಾರ್ವಜನಿಕ ಆಸ್ಪತ್ರೆಗಳು ಹಾಗೂ ಖಾಸಗಿ ಆಸ್ಪತ್ರೆಗಳು ಜೊತೆಗೂಡಿ ಈ ಸಾಂಕ್ರಾಮಿಕ ರೋಗದ ವಿರುದ್ದ ಹೋರಾಡಬೇಕಾಗಿದೆ ಹಾಗೂ ಕೋವಿಡ್-19 ನಿಂದ ಬಳಲುತ್ತಿರುವ ರೋಗಿಗಳಿಗೆ ಅಗತ್ಯ ಚಿಕಿತ್ಸೆ ಒದಗಿಸುವುದು ಅತ್ಯಂತ ಅವಶ್ಯಕವಾಗಿದೆ. ಆದ್ದರಿಂದ ಎಲ್ಲ ಖಾಸಗಿ ಆಸ್ಪತ್ರೆಗಳು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನೊಂದಿಗೆ ನೋಂದಾವಣೆ ಮಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

ನೋಂದಣಿ‌ ಪ್ರಕ್ರಿಯೆ:

ಖಾಸಗಿ ಆಸ್ಪತ್ರೆಗಳ ನೋಂದಾವಣೆ ಪ್ರಕ್ರಿಯೆಯು ಅತ್ಯಂತ ಸರಳ ಸುಲಭವಾಗಿದ್ದು
https://sast.karnataka.gov.in ವೆಬ್‌ಸೈಟ್ ಮೂಲಕ ಖಾಸಗಿ ಆಸ್ಪತ್ರೆಗಳು ನೋಂದಾವಣೆ
ಮಾಡಿಕೊಳ್ಳಬಹುದಾಗಿದೆ.

https://sast.karnataka.gov.in ವೆಬ್‌ಸೈಟ್‌ಗೆ ಭೇಟಿ ನೀಡಿ New empanelment request
ಅನ್ನು ಕ್ಲಿಕ್ ಮಾಡುವುದು.

ಇದರ ನಂತರ empanelment request ನಲ್ಲಿ ಕೋರಲಾದ ಆಸ್ಪತ್ರೆಯ ವಿವರಗಳನ್ನು ಭರ್ತಿ
ಮಾಡಿ, ಅವಶ್ಯಕ ದಾಖಲೆಗಳೊಂದಿಗೆ ಆನ್‌ಲೈನ್‌ನಲ್ಲಿ ಸಲ್ಲಿಸುವುದು.

ನಂತರದಲ್ಲಿ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಸದರಿ empanelment ಕೋರಿಕೆಯನ್ನು
ಪರಿಶೀಲಿಸಿ ಆನ್‌ಲೈನ್ ಮೂಲಕವೇ ಅನುಮೋದನೆ ನೀಡುತ್ತದೆ.

ಆದ್ದರಿಂದ ದಯಮಾಡಿ ಎಲ್ಲ ಖಾಸಗಿ ಆಸ್ಪತ್ರೆಗಳು ನೋಂದಾವಣೆ ಮಾಡಿಕೊಳ್ಳುವ ಮೂಲಕ
ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಲು ನೆರವಾಗುವಂತೆ ಈ ಮೂಲಕ ಕೋರಲಾಗಿದೆ.

ಹೆಚ್ಚಿನ ವಿವರಗಳಿಗಾಗಿ ವೆಬ್ ಸೈಟ್ http://arogya.karnataka.gov.in/sast/ ಭೇಟಿ ನೀಡಿ ಮತ್ತು ಟೋಲ್ ಫ್ರೀ ಸಂಖ್ಯೆ: 1800 425 8330 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ತಿಳಿಸಿದ್ದಾರೆ.

ಮತ್ತೆ ಲಾಕ್ ಡೌನ್ ವಿಸ್ತರಣೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button