ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಲಸಿಕೆ ಕೊರತೆ ಬಗ್ಗೆ ಗಮನಕ್ಕೆ ಬಂದಿದೆ. ಶೀಘ್ರದಲ್ಲಿ ಲಸಿಕೆ ಸಮಸ್ಯೆ ಬಗೆಹರಿಸಲಾಗುವುದು. ರಾಜ್ಯಕ್ಕೆ ಹೆಚ್ಚುವರಿಯಾಗಿ 300ರಿಂದ 800 ಮೆಟ್ರಿಕ್ ಟನ್ ಆಕ್ಸಿಜನ್ ಪೂರೈಕೆ ಮಾಡಲು ಕೇಂದ್ರ ಸರ್ಕಾರ ಒಪ್ಪಿದೆ. ಅಲ್ಲದೇ 50,000ರಿಂದ 1,22,000 ರೆಮ್ ಡಿಸಿವಿರ್ ಲಸಿಕೆ ನೀಡುವುದಾಗಿ ಭರವಸೆ ನೀಡಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಜಾರಿಗೆ ತಂದಿರುವ ವೀಕೆಂಡ್ ಕರ್ಫ್ಯೂ ಯಶಸ್ವಿಯಾಗಿದೆ. ವೀಕೆಂಡ್ ಕರ್ಫ್ಯೂ ಮುಂದುವರೆಸುವ ಪ್ರಸ್ತಾಪ ರಾಜ್ಯ ಸರ್ಕಾರದ ಮುಂದಿಲ್ಲ ಎಂದರು.
ನಿನ್ನೆ ನಡೆದ ಸಭೆಯಲ್ಲಿ ವೀಕೆಂಡ್ ಕರ್ಫ್ಯೂ ವಿಸ್ತರಣೆ ಬಗ್ಗೆ ಚರ್ಚೆಯಾಗಿಲ್ಲ. ಈಗಿರುವ ಮಾರ್ಗಸೂಚಿಗಳೆ ಮುಂದುವರೆಯಲಿದೆ ಎಂದು ಹೇಳಿದರು.
ಕೋವಿಡ್ ರೋಗಿಗಳ ಚಿಕಿತ್ಸೆ ನೋಂದಣಿಗೆ ಇಲ್ಲಿದೆ ಸುಲಭ ವಿಧಾನ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ