ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಜ್ಯದಲ್ಲಿ ಭಾನುವಾರ 34 ಸಾವಿರ ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಬೆಂಗಳೂರಿನಲ್ಲೇ 20 ಸಾವಿರ ಜನರಿಗೆ ಸೋಂಕು ತಗುಲಿದೆ. ಬೆಳಗಾವಿಯಲ್ಲಿ 336 ಜನರಿಗೆ ಭಾನುವಾರ ಸೋಂಕು ದೃಢಪಟ್ಟಿದೆ.
ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮತ್ತು ಇದೇ ರೀತಿ ಮುಂದುವರಿದಲ್ಲಿ ನಿಯಂತ್ರಣ ತಪ್ಪಬಹುದು ಎನ್ನುವ ಆತಂಕದ ಹಿನ್ನೆಲೆಯಲ್ಲಿ ಲಾಕ್ ಡೌನ್ ಅನಿವಾರ್ಯ ಎನ್ನುವ ನಿರ್ಧಾರಕ್ಕೆ ಸರಕಾರ ಬಂದಿದೆ. ಹಾಗಾಗಿ ಸೋಮವಾರ ನಡೆಯಲಿರುವ ಸಚಿವಸಂಪುಟ ಸಭೆ ಅತ್ಯಂತ ಮಹತ್ವದ್ದಾಗಿದೆ.
ರಾಜ್ಯದಲ್ಲಿ ಭಾನುವಾರ 34 ಸಾವಿರ ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಬೆಂಗಳೂರಿನಲ್ಲೇ 20 ಸಾವಿರ ಜನರಿಗೆ ಸೋಂಕು ತಗುಲಿದೆ
ಮುಖ್ಯಮಂತ್ರಿಗಳು ಸೇರಿದಂತೆ ಬಹುತೇಕ ಸಚಿವರು, ಅಧಿಕಾರಿಗಳು ಕನಿಷ್ಠ 10 ದಿನ ಲಾಕ್ ಡೌನ್ ಮಾಡಲೇಬೇಕು. ಹಾಗಾದಲ್ಲಿ ಮಾತ್ರ ಚೈನ್ ಬ್ರೇಕ್ ಮಾಡಲು ಸಾಧ್ಯ ಎನ್ನುವ ನಿರ್ಧಾರಕ್ಕೆ ಬಂದಿದ್ದಾರೆ. ಅದಕ್ಕಾಗಿ ಮಂಗಳವಾರದಿಂದ ಮೇ 4ರ ವರೆಗೆ ಸಂಪೂರ್ಣ ಲಾಕ್ ಡೌನ್ ಮಾಡುವ ಸಾಧ್ಯತೆ ಹೆಚ್ಚಾಗಿದೆ. ಸೋಮವಾರ ಸಂಜೆಯ ಹೊತ್ತಿಗೆ ಈ ಕುರಿತು ಸರಕಾರದ ಸ್ಪಷ್ಟ ಆದೇಶ ಹೊರಬೀಳಬಹುದು.
ರಾಜ್ಯದಲ್ಲಿ ಪ್ರಸ್ತುತ ಉಂಟಾಗಿರುವ ಪರಿಸ್ಥಿತಿ ಹಿನ್ನೆಲೆಯಲ್ಲಿ ಜನರು ಲಾಕ್ ಡೌನ್ ಗೆ ಮಾನಸಿಕವಾಗಿ ಸಿದ್ದರಾಗುವುದು ಅನಿವಾರ್ಯವಾಗಿದೆ. ಒಮ್ಮೆ ಚೈನ್ ಬ್ರೇಕ್ ಆದರೆ ಮಾತ್ರ ಕೊರೋನಾ ನಿಯಂತ್ರಣಕ್ಕೆ ಬರಬಹುದು. ಇಲ್ಲವಾದಲ್ಲಿ ರಾಜ್ಯಾದ್ಯಂತ ಸಾವಿನ ಮೆರವಣಿಗೆ ನಡೆಯಬಹುದು. ಈಗಿನ ವ್ಯಾಪಾರ, ವ್ಯವಹಾರಕ್ಕಿಂತ ಜೀವ ಉಳಿಸಿಕೊಳ್ಳುವುದೇ ಮುಖ್ಯ ಎನ್ನುವುದನ್ನು ಜನ ಅರ್ಥ ಮಾಡಿಕೊಳ್ಳಬೇಕಿದೆ.
ಸೋಮವಾರ ಸಂಜೆಯ ಹೊತ್ತಿಗೆ ರಾಜ್ಯದಲ್ಲಿ ಲಾಕ್ ಡೌನ್ ಕುರಿತು ಸ್ಪಷ್ಟ ನಿರ್ಧಾರ ಹೊರಬೀಳಬಹುದು.
ಸೋಮವಾರದಿಂದ ಇನ್ನಷ್ಟು ಕಠಿಣ ನಿರ್ಧಾರ?
ಲಾಕ್ ಡೌನ್ ಸುಳಿವು ನೀಡಿದ ಸಚಿವ ಜಗದೀಶ್ ಶೆಟ್ಟರ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ