Latest

14 ದಿನ ಏನಿರುತ್ತೆ ಏನಿರಲ್ಲ? ಇಲ್ಲಿದೆ ಮಾಹಿತಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕಠಿಣ ನಿಯಮ ಜಾರಿ ಮಾಡಿದ್ದು, ನಾಳೆಯಿಂದ 14 ದಿನಗಳ ಕಾಲ ರಾಜ್ಯದಲ್ಲಿ ಲಾಕ್ ಡೌನ್ ಮಾದರಿ ಬಂದ್ ಜಾರಿ ಮಾಡಿದೆ.

ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ಕೊರೊನಾ ಸೋಂಕು ನಿಯಂತ್ರಣಕ್ಕೆರಾಜ್ಯದಲ್ಲಿ ಮುಂದಿನ 2 ವಾರ ಬಿಗಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಏನಿರುತ್ತೆ ಏನಿರಲ್ಲ ಇಲ್ಲಿದೆ ಮಾಹಿತಿ:

* ನಾಳೆಯಿಂದ 14 ದಿನಗಳ ಕಾಲ ಬೆಳಿಗ್ಗೆ 6ರಿಂದ 10ಗಂಟೆವರೆಗೆ ಅಗತ್ಯ ವಸುಗಳ ಖರೀದಿಗೆ ಮಾತ್ರ ಅವಕಾಶ
* ಕೆ ಎಸ್ ಆರ್ ಟಿಸಿ, ಬಿಎಂಟಿಸಿ ಬಸ್ ಸೇರಿದಂತೆ ಸಾರಿಗೆ ಸಂಚಾರ ಸಂಪೂರ್ಣ ಬಂದ್
* ಖಾಸಗಿ ವಾಹನ ಸಂಚಾರಕ್ಕೆ ನಿಷೇಧ
* ಗೂಡ್ಸ್ ಸರಕು ಸಾಗಾಟಕ್ಕೆ ಮಾತ್ರ ಅವಕಾಶ
* ಹೋಟೆಲ್ ನಲ್ಲಿ ಪಾರ್ಸೆಲ್ ಗೆ ಅವಕಾಶ
* ಮದ್ಯಗಂಡಿಗಳು ಓಪನ್, ಆದರೆ ಪಾರ್ಸೆಲ್ ಗೆ ಅವಕಾಶ
* ಮೆಟ್ರೋ ಸೇವೆ ಸ್ಥಗಿತ
* ಬ್ಯಾಂಕಿಂಗ್ ಕ್ಷೇತ್ರಕ್ಕೆ ಅವಕಾಶ
* ಕೃಷಿ ಚಟುವಟಿಕೆ, ಕಟ್ಟಡ ನಿರ್ಮಾಣಕ್ಕೆ ಅವಕಾಶ
* 18-45 ವರ್ಷಗಳವರೆಗಿನವರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಲಸಿಕೆ
* ಚುನಾವಣೆಗಳನ್ನು ಮುಂದೂಡಲು ಶಿಫಾರಸು

ಇಲ್ಲಿದೆ ಸಮಗ್ರ ವಿವರ – ಜನತಾ ಕರ್ಫ್ಯೂ ಮಾರ್ಗಸೂಚಿ ಪ್ರಕಟ

ರಾಜ್ಯದಲ್ಲಿ ಎಲ್ಲಾ ಚುನಾವಣೆಗಳನ್ನೂ ಮುಂದೂಡಲು ಶಿಫಾರಸ್ಸು

ರಾಜ್ಯದಲ್ಲಿ ನಾಳೆಯಿಂದಲೇ ಜನತಾ ಕರ್ಫ್ಯೂ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button