Latest

ಒಂದೇ ದಿನ 3.23 ಲಕ್ಷ ಜನರಿಗೆ ಕೊರೋನಾ; 2700 ಜನರ ಸಾವು

ಪ್ರಗತಿವಾಹಿನಿ ಸುದ್ದಿ, ನವದೆಹಲಿ – ದೇಶದಲ್ಲಿ ಒಂದೇ ದಿನ 3.23 ಲಕ್ಷ ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. 2700ಕ್ಕಿಂತ ಹೆಚ್ಚು ಜನರು ಸಾವಿಗೀಡಾಗಿದ್ದಾರೆ.

ಭಾರತದಲ್ಲಿ ಕೊರೋನಾ 2ನೇ ಅಲೆ ಒಂದೇ ಸಮನೆ ಏರುತ್ತಿದ್ದು, ಸೋಂಕಿತರ ಹಾಗೂ ಸಾವಿಗೀಡಾಗುವವರ ಸಂಖ್ಯೆ ನಿಯಂತ್ರಣಕ್ಕೆ ಸಿಗುತ್ತಿಲ್ಲ. ವಿಶ್ವದಲ್ಲೇ ಅತೀ ಹೆಚ್ಚಿನ ಪ್ರಮಾಣದಲ್ಲಿ ಭಾರತದಲ್ಲಿ ಕೊರೋನಾ ಹರಡುತ್ತಿದೆ.

Home add -Advt

ಕರ್ನಾಟಕದಲ್ಲೂ ಸೋಂಕಿತರ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಿದೆ. ಬೆಂಗಳೂರು ರಾಷ್ಟ್ರದಲ್ಲೇ ಅತೀ ಹೆಚ್ಚಿನ ಸೋಂಕಿತರ ನೆಲೆಯಾಗಿ ಪರಿಣಮಿಸಿದೆ. ಸೋಮವಾರ ಒಂದೇ ದಿನ ರಾಜ್ಯದಲ್ಲಿ 35 ಸಾವಿರ ಜನರಿಗೆ ಸೋಂಕು ದೃಢಪಟ್ಟಿದ್ದರೆ, ಬೆಂಗಳೂರಿನಲ್ಲೇ 20 ಸಾವಿರ ಜನರಿಗೆ ಪಾಸಿಟಿವ್ ಬಂದಿದೆ.

ಕರ್ನಾಟಕದಲ್ಲಿ ಕೊರೋನಾ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಇಂದಿನಿಂದ 16 ದಿನಗಳ ಕಾಲ ಜನತಾ ಕರ್ಫ್ಯೂ ಹೇರಲಾಗಿದೆ. ತುರ್ತು ಸೇವೆ ಹೊರತುಪಡಿಸಿ ಯಾವುದಕ್ಕೂ ಅವಕಾಶವಿಲ್ಲ. ಅಗತ್ಯ ವಸ್ತುಗಳ ಖರೀದಿಗೆ ಬೆಳಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ಮಾತ್ರ ಅವಕಾಶ ನೀಡಲಾಗಿದೆ. ಅಂತರ್ ಜಿಲ್ಲಾ ಪ್ರವಾಸ ನಿರ್ಬಂಧಿಸಲಾಗಿದೆ.

ಮಾಜಿ ಸಂಸದ ಎಸ್.ಬಿ.ಸಿದ್ನಾಳ ನಿಧನ

ಜನತಾ ಕರ್ಫ್ಯೂ ಮಾರ್ಗಸೂಚಿ ಪ್ರಕಟ

ರಾಜ್ಯದಲ್ಲಿ ನಾಳೆಯಿಂದಲೇ ಜನತಾ ಕರ್ಫ್ಯೂ

Related Articles

Back to top button