ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಇಂದು ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಹಾಗೂ ಪುದುಚೆರಿ ಸೇರಿದಂತೆ ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಹೊರಬೀಳಲಿದ್ದು, ಮತಎಣಿಕೆ ಮುಂದುವರಿದಿದೆ.
ಕೋವಿಡ್ ನಿಯಮಾನುಸಾರ ಮತ ಎಣಿಕೆ ಆರಂಭವಾಗಿದ್ದು, ಮಧ್ಯಾಹ್ನ 2 ಗಂಟೆ ವೇಳೆಗೆ ಫಲಿತಾಂಶದ ಸಂಪೂರ್ಣ ಚಿತ್ರಣ ಹೊರಬೀಳಲಿದೆ. ಪಶ್ಚಿಮ ಬಂಗಾಳದಲ್ಲಿ ಮಾರ್ಚ್ 27ರಂದು ಚುನಾವಣೆ ಆರಂಭವಾಗಿ 8 ಹಂತಗಳಲ್ಲಿ ಏಪ್ರಿಲ್ 29ರಂದು ಮತದಾನ ಮುಕ್ತಾಯವಾಗಿತ್ತು. ಅಸ್ಸಾಅಂ ನಲ್ಲಿ ಮೂರು ಹಂತಗಳಲ್ಲಿ ಚುನಾವಣೆ ನಡೆದಿತ್ತು. ತಮಿಳುನಾಡು, ಕೇರಳ, ಪುದುಚೆರಿಯಲ್ಲಿ ಏಪ್ರಿಲ್ 6ರಂದು ಒಂದೇ ಹಂತದಲ್ಲಿ ಚುನಾವಣಾ ಮತದಾನ ನಡೆದಿತ್ತು.
ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅವರ ಟಿಎಂಸಿ ಹಾಗೂ ಬಿಜೆಪಿ ನಡುವೆ ನೇರ ಹಣಾಹಣಿ ಏರ್ಪಟ್ಟಿದ್ದು, ಟಿಎಂಸಿ ಮುನ್ನಡೆ ಕಾಯ್ದುಕೊಂಡಿದೆ. ಬಿಜೆಪಿ ಪ್ರಬಲ ಪೈಪೋಟಿ ನೀಡಿದೆ. ಟಿಎಂಸಿ 126 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದರೆ ಬಿಜೆಪಿ 120 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ.
ತಮಿಳುನಾಡಿನಲ್ಲಿ ಎಐಎಡಿಎಂಕೆ ಹಾಗೂ ಡಿಎಂಕೆ ನಡುವೆ ಜಿದ್ದಾ ಜಿದ್ದಿನ ಪೈಪೋಟಿ ನಡೆದಿದ್ದು, ಡಿಎಂ ಕೆ ಮುನ್ನಡೆ ಕಾಯ್ದುಕೊಂಡಿದೆ. ಡಿಎಂಕೆ 125 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದರೆ ಎಐಎಡಿಎಂಕೆ 99 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ.
ಕೇರಳದಲ್ಲಿ ಎಡಪಕ್ಷ ಎಲ್ ಡಿಎಫ್ ಹಾಗೂ ಕಾಂಗ್ರೆಸ್ ನೇತೃತ್ವದ ಯುಡಿಎಫ್ ನಡುವೆ ಪೈಪೋಟಿ ನಡೆದಿದೆ. ಅಸ್ಸಾಂ ನಲ್ಲಿ ಬಿಜೆಪಿಯು ಕಾಂಗ್ರೆಸ್, ಎಐಯುಡಿಎಫ್, ಬೊಡೊಲ್ಯಾಂಡ್ ಪೀಪಲ್ ಫ್ರಂಟ್ ಸೇರಿದಂತೆ 8 ಪಕ್ಷಗಳ ಮೈತ್ರಿಕೂಟದ ವಿರುದ್ಧ ಸ್ಪರ್ಧಿಸಿದ್ದು, 55 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ.
ಪುದುಚೆರಿಯಲ್ಲಿ ಆಲ್ ಇಂಡಿಯಾ ಎನ್ ಆರ್ ಕಾಂಗ್ರೆಸ್ ಮತ್ತು ಬಿಜೆಪಿ ಮೈತ್ರಿ ಕೂಟ ಕಾಂಗ್ರೆಸ್ ವಿರುದ್ಧ ಪೈಪೋಟಿ ಸಾಧಿಸಿದ್ದು, ಬಿಜೆಪಿ ಮೈತ್ರಿಕೂಟ ಮುನ್ನಡೆಯಲ್ಲಿದೆ.
ಮತ ಎಣಿಕೆ ಆರಂಭ: ಫಲಿತಾಂಶ ವಿಳಂಬ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ