Latest

ಕಾರ್ಯಕರ್ತರ ಹೋರಾಟ, ಪರಿಶ್ರಮ ವ್ಯರ್ಥವಾಗಲು ಬಿಡುವುದಿಲ್ಲ; ಬಿ.ವೈ.ವಿಜಯೇಂದ್ರ

ಪ್ರಗತಿವಾಹಿನಿ ಸುದ್ದಿ; ರಾಯಚೂರು: ಮಸ್ಕಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರವಿಹಾಳ ಗೆಲುವು ಖಚಿತವಾಗಿದೆ. ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಗಿಂತ 15,000 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಸೋಲು ಖಚಿತವಾಗುತ್ತಿದ್ದಂತೆ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ, ಜನಾದೇಶಕ್ಕೆ ತಲೆಬಾಗುತ್ತಾ ಚುನಾವಣೆಗಳಲ್ಲಿ ಸೋಲು-ಗೆಲುವುಗಳನ್ನು ಸಮಭಾವದಿಂದ ಸ್ವೀಕರಿಸೋಣ ಎಂದಿದ್ದಾರೆ.

ಮಸ್ಕಿ ಕಾರ್ಯಕರ್ತರು ಎದೆಗುಂದುವುದು ಬೇಡ. ನಿಮ್ಮ ಪರಿಶ್ರಮ, ಹೋರಾಟ ವ್ಯರ್ಥವಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮಮೇಲಿದೆ. ಕಾರ್ಯಕರ್ತನಾಗಿ ಸದಾ ನಿಮ್ಮೊಂದಿಗಿರುವೆ. ಬಿಜೆಪಿ ಬೆಂಬಲಿಸಿದ ಮತದಾರ ಬಂಧುಗಳಿಗೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.
ನನಗೆ ವಿಶ್ವಾಸ ದ್ರೋಹವಾಗಿದೆ ಎಂದ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button