Kannada NewsLatest

ನಿಷೇಧಾಜ್ಞೆ ವಿಸ್ತರಣೆ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕೋವಿಡ್-19 ಸಾಂಕ್ರಾಮಿಕ ರೋಗದ ಹರಡುವಿಕೆಯನ್ನು ತಡೆಗಟ್ಟಲು ಮುಂಜಾಗೃತಾ ಕ್ರಮವಾಗಿ ಮೇ.12 ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆಯನ್ನು ಮುಂದುವರೆಸಿ, ಜಿಲ್ಲಾಧಿಕಾರಿ ಡಾ.ಕೆ. ಹರೀಶ್ ಕುಮಾರ್ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಲ್ಲಿ ಕೋರೊನಾ ವೈರಸ್‌ ಸೋಂಕು ಹರಡದಂತೆ ಸಾರ್ವಜನಿಕರ ಆರೋಗ್ಯ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಏಪ್ರಿಲ್ 21ರ ರಾತ್ರಿ 9 ಗಂಟೆಯಿಂದ ಮೇ.4 ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆಯನ್ನು ಹೊರಡಿಸಲಾಗಿತ್ತು.

ಆದರೆ, ಕೊವಿಡ್ ಪ್ರಕರಣಗಳಲ್ಲಿ ಪ್ರತಿದಿನ ಹೆಚ್ಚಳ ಕಂಡುಬರುತ್ತಿರುವುದರಿಂದ ಮೇ.4 ಬೆಳಿಗ್ಗೆ 6 ಗಂಟೆಯವರೆಗೆ ಇರುವ ನೀಷೆಧಾಜ್ಞೆಯನ್ನು ಮೇ.12 ಬೆಳಿಗ್ಗೆ 6 ಗಂಟೆಯವರೆಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಅವರು ತಿಳಿಸಿದ್ದಾರೆ.

ಅವಶ್ಯಕ ಚಟುವಟಿಕೆಗಳು ಹಾಗೂ ತಾಲೂಕಾ ಮಟ್ಟದ ವಿಪತ್ತು ನಿರ್ವಹಣಾ ಸಮಿತಿಯಿಂದ ಪೂರ್ವಾನುಮತಿ ಪಡೆದುಕೊಂಡ ಚಟುವಟಿಕೆಗಳಿಗೆ ಮಾತ್ರ ಅವಕಾಶವಿರುತ್ತದೆ. ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆ 188 ರ ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ದಂಡಾಧಿಕಾರಿಗಳಾದ ಡಾ.ಕೆ.ಹರೀಶ್ ಕುಮಾರ್ ಅವರು ಎಚ್ಚರಿಕೆ ನೀಡಿದ್ದಾರೆ.
ಆಕ್ಸಿಜನ್ ಉತ್ಪಾದಕರು ಮತ್ತು ಸರಬರಾಜುದಾರರ ಜೊತೆ ಸಿಎಂ ಮಹತ್ವದ ಸಭೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button