ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶಾದ್ಯಂತ ಹೆಚ್ಚುತ್ತಿರುವ ಕೊರೊನಾ 2ನೇ ಅಲೆ ತಡೆಗಟ್ಟಲು ಸಂಪೂರ್ಣ ಲಾಕ್ ಡೌನ್ ಜಾರಿಗೆ ಪ್ರಧಾನಿ ನರೇಂದ್ರ ಮೋದಿ ಮೇಲೆ ಒತ್ತಡಗಳು ಹೆಚ್ಚುತ್ತಿವೆ. ದೇಶದಲ್ಲಿ ಲಾಕ್ ಡೌನ್ ಜಾರಿ ಮಾಡಿದರೆ ಮಾತ್ರ 3ನೇ ಅಲೆಯನ್ನು ತಡೆಗಟ್ಟಬಹುದು ಎಂದು ಏಮ್ಸ್ ಎಚ್ಚರಿಕೆ ನೀಡಿದೆ.
ಈಗಾಗಲೇ ಕೆಲ ರಾಜ್ಯಗಳಲ್ಲಿ ವೀಕೆಂಡ್ ಲಾಕ್ ಡೌನ್ ಜಾರಿ ಮಾಡಲಾಗಿದೆ. ಆದರೆ ಇದರಿದ ಪ್ರಯೋಜನವಾಗುವುದಿಲ್ಲ. ಕೊರೊನಾ 3ರನೇ ಅಲೆಯಿಂದ ದೇಶವನ್ನು ರಕ್ಷಿಸಬೇಕು ಎಂದರೆ ಕೆಲದಿನಗಳ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡುವುದು ಉತ್ತಮ. ಜನರು ಒಬ್ಬರಿಗೊಬ್ಬರು ಅಂತರ ಪಾಲಿಸಿದರೆ ಮಾತ್ರ ಕೊರೊನಾ ಸೋಂಕು ತಡೆಯಲು ಸಾಧ್ಯ ಎಂದು ಏಮ್ಸ್ ನಿರ್ದೇಶಕ ರಣದೀಪ್ ಗುಲೇರಿಯಾ ತಿಳಿಸಿದ್ದಾರೆ.
ಈ ನಡುವೆ ಕೊರೊನಾ ಟಾಸ್ಕ್ ಪೋರ್ಸ್, ಸುಪ್ರೀಂ ಕೋರ್ಟ್ ಹಾಗೂ ಅಮೆರಿಕ ಅಧ್ಯಕ್ಷರ ವೈದ್ಯಕೀಯ ಸಲಹೆಗಾರರು ಕೂಡ ಭಾರತದಲ್ಲಿ ಲಾಕ್ ಡೌನ್ ಜಾರಿ ಮಾಡುವಂತೆ ಸಲಹೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಇಂದು ಸಂಜೆ ನಡೆಯಲಿರುವ ಸಂಪುಟ ಸಭೆಯಲ್ಲಿ ಲಾಕ್ ಡೌನ್ ಜಾರಿ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ