Kannada NewsLatest

ಬೆಳಗಾವಿಗೆ ಬರುತ್ತಿದ್ದ ಆಕ್ಸಿಜನ್ ಟ್ಯಾಂಕರ್ ಅಪಘಾತ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿಗೆ ಬರುತ್ತಿದ್ದ ಆಕ್ಸಿಜನ್ ಟ್ಯಾಂಕರ್ ಭೀಕರ ಅಪಘಾತಕ್ಕಿಡಾಗಿದ್ದು, ಟ್ಯಾಂಕರ್ ನ ಟೈರ್ ಬ್ಲಾಸ್ಟ್ ಆದ ಘಟನೆ ಮುತ್ನಾಳ ಗ್ರಾಮದ ಬಳಿ ನಡೆದಿದೆ.

ಬಳ್ಳಾರಿಯಿಂದ ಬೆಳಗಾವಿಗೆ ಬರುತ್ತಿದ್ದ ಆಕ್ಸಿಜನ್ ಟ್ಯಾಂಕರ್ ಓವರ್ ಟೇಕ್ ಮಾಡಲು ಹೋಗಿ ಲಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಟ್ಯಾಂಕರ್ ನ ಟೈರ್ ಬ್ಲಾಸ್ಟ್ ಆಗಿ ಆಕ್ಸೆಲ್ ಕಟ್ ಆಗಿದೆ. ಅದರೆ ಆಕ್ಸಿಜನ್ ಲಿಕ್ವಿಡ್ ಟ್ಯಾಂಕ್ ಗೆ ಯಾವುದೇ ಹಾನಿಯಾಗಿಲ್ಲ.

ಹಿರೇಬಾಗೆವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button