Latest

ರಾಜ್ಯದಲ್ಲಿ ಮೇ 10ರಿಂದ ಲಾಕ್ ಡೌನ್? : ಸಂಜೆ 4 ಗಂಟೆಗೆ ಸಿಎಂ ಅಧಿಕೃತ ಘೋಷಣೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ನಿಯಂತ್ರಣಕ್ಕೆ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಸಂಜೆ 4 ಗಂಟೆಗೆ ಅಧಿಕೃತ ಘೋಷಣೆ ಮಾಡಲಿದ್ದಾರೆ.

Home add -Advt

ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಮೇ 10 ರಿಂದ ಲಾಕ್ ಡೌನ್ ಜಾರಿ ಮಾಡುವ ಬಗ್ಗೆ ನಿರ್ಧರಿಸಲಾಗಿದೆ. ಈ ಕುರಿತು ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ.

ಕೊರೋನಾ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಸರಕಾರ ಅನಿವಾರ್ಯವಾಗಿ ಈ ನಿರ್ಧಾರಕ್ಕೆ ಬಂದಿದೆ.

ಎಲ್ಲ ಕಡೆಯಿಂದಲೂ ಸರಕಾರದ ಮೇಲೆ ಲಾಕ್ ಡೌನ್ ಕುರಿತು ಒತ್ತಡ ಕೇಳಿ ಬಂದಿತ್ತು. ಸೋಂಕು ಮತ್ತು ಸಾವು ನಿಯಂತ್ರಣಕ್ಕೆ ತರಲು ಸರಕಾರಕ್ಕೆ ಲಾಕ್ ಡೌನ್ ಅನಿವಾರ್ಯವಾಗಿದೆ.

 

ಲಾಕ್ ಡೌನ್ ಸುಳಿವು ನೀಡಿದ ಸಿಎಂ ಯಡಿಯೂರಪ್ಪ

Related Articles

Back to top button