Latest

ಖಾಸಗಿ ಲ್ಯಾಬ್ ಗಳ ವಸೂಲಿಗೆ ಕಡಿವಾಣ; ಸಿಟಿ ಸ್ಕ್ಯಾನ್ ಗೆ ದರ ನಿಗದಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಬೆನ್ನಲ್ಲೇ ಖಾಸಗಿ ಆಸ್ಪತ್ರೆಗಳು, ಲ್ಯಾಬ್ ಗಳು ರೋಗಿಗಳಿಂದ ಮನಸೋ ಇಚ್ಛೆ ಹಣ ವಸೂಲಿ ಮಾಡುವ ದಂಧೆಗೆ ಇಳಿದಿದ್ದವು. ಇದೀಗ ಇಂತಹ ಆಸ್ಪತ್ರೆ ಹಾಗೂ ಲ್ಯಾಬ್ ಗಳಿಗೆ ಸರ್ಕಾರ ಮೂಗುದಾರ ಹಾಕಿದೆ.

ಈ ಕುರಿತು ಮಾತನಾಡಿದ ಆರೋಗ್ಯ ಸಚಿವ ಡಾ.ಸುಧಾಕರ್, ಖಾಸಗಿ ಆಸ್ಪತ್ರೆಗಳು ಸಿಟಿ ಸ್ಕ್ಯಾನ್ ಹೆಸರಲ್ಲಿ ಹಣ ವಸೂಲಿ ಮಾಡುತ್ತಿರುವ ಬಗ್ಗೆ ದೂರುಗಳು ಬಂದಿದ್ದು, ಅಂತಹ ಲ್ಯಾಬ್ ಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

ಇನ್ಮುಂದೆ ರಾಜ್ಯದ ಎಲ್ಲಾ ಖಾಸಗಿ ಆಸ್ಪತ್ರೆ ಲ್ಯಾಬ್ ಗಳಲ್ಲಿ ಸಿಟಿ ಸ್ಕ್ಯಾನ್ ಗೆ 1,500 ರೂಪಾಯಿ ದರ ನಿಗದಿ ಮಾಡಲಾಗಿದ್ದು, ಅದಕ್ಕಿಂತ ಹೆಚ್ಚಿಗೆ ಹಣ ಪಡೆಯುವಂತಿಲ್ಲ. ಒಂದು ವೇಳೆ ನಿಗದಿಪಡಿಸಿದ ದರಕ್ಕಿಂತ ಹೆಚ್ಚು ಹಣ ಪಡೆದರೆ ಅಂತಹ ಆಸ್ಪತ್ರೆ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಕೊಳವೆ ಬಾವಿಗೆ ಬಿದ್ದ 4 ವರ್ಷದ ಕಂದಮ್ಮ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button