Latest

ಕೇಂದ್ರದಿಂದ ಬಂದಿರುವ ಕೋವ್ಯಾಕ್ಸಿನ್ 45 ವರ್ಷ ಮೇಲ್ಪಟ್ಟ ಅರ್ಹರಿಗೆ ಮಾತ್ರ ಎಂದ ಆರೋಗ್ಯ ಸಚಿವ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೇಂದ್ರ ಸರ್ಕಾರದಿಂದ ಸರಬರಾಜಾಗಿರುವ ಕೋವಿಡ್ ಲಸಿಕೆಗಳನ್ನು 45 ವರ್ಷ ಮೇಲ್ಪಟ್ಟವರಿಗೆ ಮಾತ್ರ ನೀಡಲಾಗುವುದು ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಲಭ್ಯವಿರುವ ಕೋವಿಶೀಲ್ಡ್ ಲಸಿಕೆಯಲ್ಲಿ 70%ರಷ್ಟನ್ನು 2ನೇ ಡೋಸ್ ಬಾಕಿಯಿರುವ 45 ವರ್ಷ ಮೇಲ್ಪಟ್ಟವರಿಗೆ ಆದ್ಯತೆ ಮೇರೆಗೆ ನೀಡಲಾಗುವುದು. ಉಳಿದ 30% ಲಸಿಕೆಯನ್ನು 45 ವರ್ಷ ಮೇಲ್ಪಟ್ಟವರಿಗೆ 1ನೇ ಡೋಸ್ ನೀಡಲು ಬಳಸಲಾಗುವುದು ಎಂದು ಹೇಳಿದ್ದಾರೆ.

ಕೋವ್ಯಾಕ್ಸಿನ್ ಲಸಿಕೆಗಳು ಕಡಿಮೆ ಪ್ರಮಾಣದಲ್ಲಿ ಸರಬರಾಜಾಗಿರುವ ಕಾರಣ ಜಿಲ್ಲೆಗಳಿಗೆ ಹಂಚಿಕೆಯಾದ ಕೋವ್ಯಾಕ್ಸಿನ್ ಲಸಿಕೆಯನ್ನು ಮೊದಲನೇ ಡೋಸ್ ಪಡೆದು ಕನಿಷ್ಟ 6 ವಾರಗಳಾಗಿದ್ದರೆ, 2ನೇ ಡೋಸ್ ಗೆ ಬಾಕಿ ಇರುವ 45 ವರ್ಷ ಮೇಲ್ಪಟ್ಟ ಅರ್ಹ ಫಲಾನುಭವಿಗಳಿಗೆ ಮಾತ್ರ ನೀಡಲು ಉಪಯೋಗಿಸಲಾಗುತ್ತದೆ ಎಂದು ಟ್ವಿಟರ್ ನಲ್ಲಿ ತಿಳಿಸಿದ್ದಾರೆ.

ಜಿಲ್ಲಾಸ್ಪತ್ರೆಯ ಆಕ್ಸಿಜನ್ ಸಿಲಿಂಡರ್ ನ್ನೇ ಕದ್ದೊಯ್ದ ಕಳ್ಳರು

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button