Latest

ಅನಗತ್ಯವಾಗಿ ರಸ್ತೆಗಿಳಿದರೆ ಹುಷಾರ್…!

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಮೇ 10 ಸೋಮವಾರದಿಂದ ಮೇ 24ರವರೆಗೆ ರಾಜ್ಯಾದಂತ ಸಂಪೂರ್ಣ ಲಾಕ್ ಡೌನ್ ಜಾರಿಯಾಗಿದ್ದು, ಅನಗತ್ಯವಾಗಿ ರಸ್ತೆಗಳಲ್ಲಿ ಓಡಾಟನಡೆಸಿದರೆ ಅಂತವರ ವಿರುದ್ಧ ಕಾನೂನು ಕ್ರಮ ಕೌಗೊಳ್ಳಲು ಪೊಲೀಸರು ಸಜ್ಜಾಗಿದ್ದಾರೆ.

ಈ ಕುರಿತು ಮಾತನಾಡಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಸೋಮವಾರದಿಂದ ಯಾರೂ ಕೂಡ ಅನಗತ್ಯವಾಗಿ ಮನೆಯಿಂದ ಹೊರ ಬರುವಂತಿಲ್ಲ. ಒಂದು ವೇಳೆ ಅನಗತ್ಯವಾಗಿ ರಸ್ತೆಗಳಲ್ಲಿ ಓಡಾಡಿದರೆ, ವಾಹನ ಚಲಾಯಿಸಿದರೆ ಅಂತವರನ್ನು ಬಂಧಿಸಿ, ವಾಹನಗಳನ್ನು ಜಪ್ತಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಅಗತ್ಯ ವಸ್ತುಗಳ ಖರೀದಿಗಾಗಿ ಬೆಳಿಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ಅವಕಾಶ ನಿಡಲಾಗಿದೆ. 10 ಗಂಟೆಯ ಬಳಿಕ ಹೊರಬರುವಂತಿಲ್ಲ. ಮೆಡಿಕಲ್ ಎಮರ್ಜನ್ಸಿ ಹೊರತಾಗಿ ಬೇರೆ ಯಾವದು ಕಾರಣಕ್ಕೂ ಮನೆಯಿಂದ ಆಚೆ ಬರುವಂತಿಲ್ಲ. ಒಂದು ವೇಳೆ ಅನಗತ್ಯವಾಗಿ ಓಡಾಡಿದರೆ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಜಾರಿ ಮಾಡಿರುವ ನಿಯಮಗಳನ್ನು ಜನರು ಪಾಲನೆ ಮಾಡಬೇಕು ಎಂದು ತಿಳಿಸಿದ್ದಾರೆ.
ಮತ್ತೊಂದು ಕಲ್ಲು ಕ್ವಾರಿ ಸ್ಫೋಟ; 10 ಕಾರ್ಮಿಕರ ದುರ್ಮರಣ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button