ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಇಂದಿನಿಂದ ರಾಜ್ಯಾದ್ಯಂತ 14 ದಿನಗಳ ಕಾಲ ಲಾಕ್ ಡೌನ್ ಜಾರಿಯಾಗಿದ್ದು, ಅಗತ್ಯ ವಸ್ತುಗಳ ಖರೀದಿ ಸಮಯ ಮುಗಿಯುತ್ತಿದ್ದಂತೆ ಪೊಲೀಸರು ಫೀಲ್ಡಿಗಿಳಿದಿದ್ದು, ಅನಗತ್ಯವಾಗಿ ಓಡಾಡುತ್ತಿದ್ದವರಿಗೆ ಲಾಠಿ ರುಚಿ ತೋರಿಸಿದ್ದಾರೆ
ಬೆಳಿಗ್ಗೆ 10 ಗಂಟೆಯಾಗುತ್ತಿದ್ದಂತೆಯೇ ಖಾಕಿ ಪಡೆಗಳು ಫೀಲ್ಡಿಗಿಳಿದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ಕಾರಿನಲ್ಲಿ ಕುಟುಂಬ ಸಮೇತವಾಗಿ ಊರಿಗೆ ಹೊರಟಿದ್ದ ವ್ಯಕ್ತಿಯನ್ನು ತಡೆದ ಪೊಲೀಸರು ಆತನನ್ನು ಕಾರಿನಿಂದ ಕೆಳಗಿಳಿಸಿ ಕಪಾಳಮೋಕ್ಷ ಮಾಡಿದ್ದಾರೆ. ಲಾಕ್ ಡೌನ್ ನಿಯಮ ಉಲ್ಲಂಘಿಸಿ ಸಂಚಾರ ನಡೆಸಿದ್ದಕ್ಕೆ ಲಾಠಿ ಏಟು ನೀಡಿದ್ದಾರೆ.
ಈ ನಡುವೆ ಕಲಬುರ್ಗಿಯ ಸೂಪರ್ ಮಾರ್ಕೆಟ್ ಏರಿಯಾದಲ್ಲಿ ಕದ್ದುಮುಚ್ಚಿ ಓಡಾಡುತ್ತಿದ್ದ ಜನರ ಮೇಲೆ ಪೊಲೀಸರು ಹಿಗ್ಗಾಮುಗ್ಗಾ ಲಾಠಿ ಬೀಸಿದ್ದಾರೆ. ಗದಗ, ಹಾವೇರಿ ಕೋಲಾರ ಜಿಲ್ಲೆಗಳಲ್ಲಿ 10 ಗಂಟೆ ಬಳಿಕವೂ ಮಾರ್ಕೆಟ್ ನಲ್ಲಿ ತರಕಾರಿ ಮಾರಾಟ ಮಾಡುತ್ತಿದ್ದವರ ಮೇಲೆ ಲಾಠಿ ಪ್ರಹಾರ ನಡೆಸಲಾಗಿದೆ.
ಒಟ್ಟಾರೆ ರಾಜ್ಯಾದ್ಯಂತ ಮೊದಲ ದಿನ ಲಾಕ್ ಡೌನ್ ಕಟ್ಟುನಿಟ್ಟಾಗಿ ಜಾರಿಗೆ ಬಂದಿದ್ದು, ಅನಗತ್ಯವಾಗಿ ಓಡಾಟ ನಡೆಸುವವರ ಮೇಲೆ ಲಾಠಿ ಬೀಸುತ್ತಿರುವ ಪೊಲೀಸರು, ವಾಹನಗಳನ್ನು ಸೀಜ್ ಮಾಡಿ ಕ್ರಮ ಕೈಗೊಳ್ಳುತ್ತಿದ್ದಾರೆ.
ಹೆಚ್ಚುತ್ತಿದೆ ಅಪಾಯಕಾರಿ ಬ್ಲ್ಯಾಕ್ ಫಂಗಸ್ ಕೋವಿಡ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ