ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ಕೊರೊನಾ ಸೋಂಕಿನಿಂದ ಮನನೊಂದ ನಿವೃತ್ತ ತಹಶೀಲ್ದಾರ್ ಒಬ್ಬರು ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಸೋಮಾ ನಾಯಕ್ (72) ಆತ್ಮಹತ್ಯೆಗೆ ಶರಣಾದ ನಿವೃತ್ತ ಉಪತಹಶೀಲ್ದಾರ್. ಡೆತ್ ನೋಟ್ಬರೆದಿಟ್ಟು ತಮ್ಮ ಕಾರಿನಲ್ಲೇ ತಮಗೆ ತಾವೇ ಶೂಟ್ ಮಾಡಿಕೊಂಡು ಸಾವನ್ನಪ್ಪಿದ್ದಾರೆ.
ನನ್ನಿಂದಲ್ಲೇ ನನ್ನ ಮಕ್ಕಳು, ಮೊಮ್ಮಕ್ಕಳಿಗೆ ಕೊರೊನಾ ಸೋಂಕು ಹರದುವತಾಯಿತು. ನನಗೆ ವಯಸ್ಸಾಗಿರುವುದರಿಂದ ಬದುಕವ ಸಾಧ್ಯತೆ ಕಡಿಮೆ. ನನ್ನ ಮಕ್ಕಳು, ಮೊಮ್ಮಕ್ಕಳಿಗೆ ನನ್ನ ಕಣ್ಣೆದುರೇ ಏನಾದರೂ ಆದರೆ ಅದನ್ನು ನನ್ನಿಂದ ಸಹಿಸಿಕೊಳ್ಳಲು ಸಾಧ್ಯವಿಲ್ಲ. ಹಾಗಾಗಿ ಆತ್ಮಹತ್ಯೆ ನಿರ್ಧಾರ ಮಾಡಿದ್ದೇನೆ. ನನಗೆ ಕೊರೊನಾ ಪಾಸಿಟಿವ್ ಇರುವುದರಿಂದ ಅಗ್ನಿಸ್ಪರ್ಶ ಮಾಡಲು ಅನುಕೂಲವಾಗುವಂತೆ ಜಾಗ ಆರಿಸಿಕೊಂಡಿದ್ದೇನೆ. ನನ್ನ ಬಗ್ಗೆ ಚಿಂತೆ ಬೇಡ ಎಂದು ಡೆತ್ ನೋಟ್ ಬರೆದಿಟ್ಟು ಕಾರಿನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ವೆಂಟಿಲೇಟರ್ ಸಿಗದೇ ಮೂವರ ಸೊಂಕಿತರ ದುರ್ಮರಣ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ