Latest

ಇನ್ಮುಂದೆ ಸೋಂಕಿತರು ನೇರವಾಗಿ ಆಸ್ಪತ್ರೆಗೆ ದಾಖಲಾಗುವಂತಿಲ್ಲ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇನ್ಮುಂದೆ ಸೋಂಕಿತರು ನೇರವಾಗಿ ಆಸ್ಪತ್ರೆಗಳಿಗೆ ಹೋಗಿ ದಾಖಲಾಗುವಂತಿಲ್ಲ. ವೈದ್ಯರು ಸೂಚಿಸಿದ ಬಳಿಕವಷ್ಟೇ ಆಸ್ಪತ್ರೆಗೆ ದಾಖಲಾಗಬೇಕು ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಬೆಡ್ ಬ್ಲಾಕಿಂಗ್ ಪ್ರಕರಣಗಳು ಹೆಚ್ಚುತ್ತಿವೆ. ಅಕ್ರಮ ತಡೆಗಟ್ಟುವ ನಿಟ್ಟಿನಲ್ಲಿ ಇನ್ಮುಂದೆ ಮ್ಯಾನುವಲ್ ಬೆಡ್ ಬುಕಿಂಗ್ ರದ್ದು ಮಾಡಲಾಗಿದ್ದು, ಸೋಂಕಿತರಿಗೆ ವೈದ್ಯರೇ ಬೆಡ್ ಬುಕ್ ಮಾಡುವಂತೆ ಸೂಚಿಸಲಾಗಿದೆ. ಹಾಗಾಗಿ ಸೋಂಕಿತರು ನೇರವಾಗಿ ಆಸ್ಪತ್ರೆಗೆ ಹೋಗಿ ದಾಖಲಾಗುವಂತಿಲ್ಲ. ಕೋವಿಡ್ ಕೇರ್ ಸೆಂಟರ್ ಗಳಲ್ಲಿ ವೈದರನ್ನು ನೇಮಕ ಮಾಡಲಾಗಿದ್ದು, ಸೋಂಕಿತರು ಕೋವಿಡ್ ಕೇರ್ ಸೆಂಟರ್ ಗೆ ಹೋಗಬೇಕು. ಅಲ್ಲಿ ವೈದ್ಯರು ಆಕ್ಸಿಜನ್ ಲೆವಲ್ ತಪಾಸಣೆ ಮಾಡಿ ಸೋಂಕಿತರನ್ನು ಆಕ್ಸಿಜನ್ ಬೆಡ್ ಗೆ ಕಳುಹಿಸಬೇಕೋ, ವೆಂಟಿಲೇಟರ್ ಗೆ ಶಿಫ್ಟ್ ಮಾಡಬೇಕೋ ಏನೆಂಬುದನ್ನು ನಿರ್ಧರಿಸುತ್ತಾರೆ. ವೈದ್ಯರು ಸೂಚಿಸಿದ ಬಳಿಕವಷ್ಟೇ ಆಸ್ಪತ್ರೆಗೆ ದಾಖಲಿಸಿಕೊಳ್ಳಲಾಗುವುದು ಎಂದರು.

ರಾಜ್ಯಾದ್ಯಂತ ಪ್ರತಿ ತಾಲೂಕು ಕೇಂದ್ರದಗಳಲ್ಲಿ 100 ಬೆಡ್ ಗಳ ಕೇರ್ ಸೆಂಟರ್ ತೆರೆಯಲು ನಿರ್ಧರಿಸಲಾಗಿದೆ. ಶೀಘ್ರದಲ್ಲಿಯೇ ಕಾರ್ಯನಿರ್ವಹಣೆಗೆ ಬರಲಿದೆ ಎಂದು ಹೇಳಿದರು.

ಕೊರೊನಾ ಸೋಂಕಿಗೆ ನೊಂದು ಆತ್ಮಹತ್ಯೆಗೆ ಶರಣಾದ ನಿವೃತ್ತ ಉಪತಹಶೀಲ್ದಾರ್

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button