ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ/ ಯರಗಟ್ಟಿ
ಲೋಕಸಭೆ ಚುನಾವಣೆ ಘೋಷಣೆಯಾದ ದಿನವೇ ಚಿಕ್ಕೋಡಿ ಲೋಕಸಭಾ ಕ್ಷೇತ್ರ ಮತ್ತು ಬೆಳಗಾವಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಭಾರತೀಯ ಜನತಾಪಾರ್ಟಿಯ ಕಾರ್ಯಕರ್ತರ ಸಮಾವೇಶ ನಡೆಯಿತು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಚಿಕ್ಕೋಡಿ ಮತ್ತು ಯರಗಟ್ಟಿಯಲ್ಲಿ ನಡೆದ ಸಮಾವೇಶದಲ್ಲಿ ಭಾಗವಹಿಸಿ, ಲೋಕಸಭಾ ಚುನಾವಣೆಗೆ ಹಗಲು, ರಾತ್ರಿ ಕೆಲಸ ಮಾಡಿ ಮತ್ತೊಮ್ಮೆ ಕೇಂದ್ರದಲ್ಲಿ ನರೇಂದ್ರ ಮೋದಿ ಸರಕಾರ ಅಧಿಕಾರಕ್ಕೆ ಬರುವಂತೆ ಮಾಡಬೇಕೆಂದು ಕರೆ ನೀಡಿದರು.
ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ, ಮಾಜಿ ಸಚಿವರಾದ ಲಕ್ಷ್ಮಣ ಸವದಿ, ಉಮೇಶ ಕತ್ತಿ, ಮರುಗೇಶ ನಿರಾಣಿ, ಶಶಿಕಾಂತ ನಾಯಿಕ, ಸಂಸದ ಸುರೇಶ ಅಂಗಡಿ, ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ಮಾಜಿ ಸಂಸದ ರಮೇಶ ಕತ್ತಿ, ಶಾಸಕರಾದ ಶಶಿಕಲಾ ಜೊಲ್ಲೆ, ಅನಿಲ ಬೆನಕೆ, ದುರ್ಯೋಧನ ಐಹೊಳೆ, ಮಹಾದೇವಪ್ಪ ಯಾದವಾಡ, ಆನಂದ ಮಾಮನಿ, ಅಭಯ ಪಾಟೀಲ, ಬಿಜೆಪಿ ಜಿಲ್ಲಾಧ್ಯಕ್ಷರಾದ ಅಣ್ಣಾಸಾಹೇಬ ಜೊಲ್ಲೆ, ಪ್ರಮುಖರಾದ ಈರಪ್ಪ ಕಡಾಡಿ, ರಾಜೇಂದ್ರ ಹರಕುಣಿ, ಅಮರಸಿಂಹ್ ಪಾಟೀಲ, ಸಂಜಯ ಪಾಟೀಲ, ಎಂ.ಬಿ.ಜಿರಲಿ, ಅಶೋಕ ಪೂಜಾರಿ, ವಿಶ್ವನಾಥ ಪಾಟೀಲ ಮೊದಲಾದವರು ಭಾಗವಹಿಸಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ