ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಜ್ಯದಲ್ಲಿ ಅಗತ್ಯ ವಸ್ತು ಖರೀದಿಗೆ ವಾಹನಗಳನ್ನು ಬಳಸಲು ಸರಕಾರ ಅನುಮತಿ ನೀಡಿದೆ.
ಈ ಕುರಿತು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ ಸೂದ್ ಟ್ವೀಟ್ ಮಾಡಿದ್ದಾರೆ. ಬೆಳಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ಅಗತ್ಯ ವಸ್ತುಗಳನ್ನು ಖರೀದಿಸಲು ವಾಹನಗಳನ್ನು ಕೊಂಡೊಯ್ಯಬಹುದು. ಆದರೆ ಅದೇ ಏರಿಯಾದಲ್ಲಿ ಬಳಸಬೇಕು. ತಮ್ಮ ಏರಿಯಾದಿಂದ ಹೊರಗೆ ಹೋಗುವಂತಿಲ್ಲ ಎಂದು ತಿಳಿಸಿದ್ದಾರೆ.
ಗ್ರಾಮೀಣ ಪ್ರದೇಶಗಳಲ್ಲಿ ಕೂಡ ಹತ್ತಿರದ ಅಂಗಡಿಗೆ ತೆರಳಲು ವಾಹನ ಬಳಸಬಹುದು. ಆದರೆ ಸೋಮವಾರ ಈ ರೀತಿ ಬಳಕೆಯಾದ ವಾಹನಗಳ ಮೇಲೆ ಹಾಕಲಾಗಿರುವ ಪ್ರಕರಣಗಳ ಕುರಿತು ಇನ್ನಷ್ಟೆ ಸ್ಪಷ್ಟನೆ ಬರಬೇಕಿದೆ.
To buy groceries,vegetables and daily needs there is NO BAR for using vehicle to yr neighbour hood shop in cities or nearest availability point in rural areas. Use this facility with discretion & not as a licence for free run everyday. Stay at home for your own safety.
— DGP KARNATAKA (@DgpKarnataka) May 10, 2021
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ