ಪ್ರಗತಿವಾಹಿನಿ ಸುದ್ದಿ, ಅಥಣಿ – ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರ ಸಹೋದರ, ಕೃಷ್ಣ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಪರಪ್ಪ ಸವದಿ ಅವರ ಪುತ್ರ ವಿನೋದ ಸವದಿ ಕೊರೋನಾದಿಂದಾಗಿ ಮೃತರಾಗಿದ್ದಾರೆ.
ಅವರಿಗೆ 36 ವರ್ಷ ವಯಸ್ಸಾಗಿತ್ತು.
ಬೆಳಗಾವಿ ಭಾಗದಲ್ಲಿ ಸಾರ್ವಜನಿಕ ಮತ್ತು ಸಾಮಾಜಿಕ ಕೆಲಸಗಳಲ್ಲಿ ಮುಂಚೂಣಿಯಲ್ಲಿರುತ್ತಿದ್ದ ಯುವ ಮುಖಂಡ ವಿನೋದ್ ಸವದಿ ಅವರು ಇಂದು ಬೆಳಗಿನ ಜಾವ ಬೆಳಗಾವಿಯಲ್ಲಿ ಕೋವಿಡ್ ನಿಂದಾಗಿ ಮೃತಪಟ್ಟಿದ್ದಾರೆ.
ಕಳೆದ ಬಾರಿ ಲಾಕ್ ಡೌನ್ ಸಂದರ್ಭದಲ್ಲಿ ವಿನೋದ್ ಅವರು ಬಡವರಿಗೆ ಮತ್ತು ನಿರ್ಗತಿಕರಿಗೆ ಆಹಾರ ಪದಾರ್ಥಗಳನ್ನು ಉಚಿತವಾಗಿ ಹಂಚಿಕೆ ಮಾಡುವುದರಲ್ಲಿ ಮತ್ತು ಇತರ ಸಾಮಾಜಿಕ ಕೆಲಸಗಳಲ್ಲಿಯೂ ಅವಿರತವಾಗಿ ಕೆಲಸ ಮಾಡಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ