Latest

ಸ್ವಂತ ಹಣದಲ್ಲಿ ಸುಸಜ್ಜಿತ ಉಚಿತ ಕೋವಿಡ್ ಕೇರ್ ಸೆಂಟರ್ ಸ್ಥಾಪಿಸಿದ ಡಿಸಿಎಂ ಸವದಿ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಅಥಣಿಯಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ಮಹಿಳಾ ವಸತಿ ಶಾಲೆಯಲ್ಲಿ ಸುಮಾರು 60 ಹಾಸಿಗೆಗಳುಳ್ಳ ಉಚಿತ ಕೋವಿಡ್ ಕೇರ್ ಸೆಂಟರ್ ಅನ್ನು ಪ್ರಾರಂಭಿಸುತ್ತಿದ್ದು ನಾಳೆಯಿಂದ ಅಧಿಕೃತವಾಗಿ ಚಾಲನೆ ಸಿಗಲಿದೆ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ  ತಿಳಿಸಿದರು.

ಕೊರೊನಾ ಮಹಾಮಾರಿಯಿಂದ ಆಸ್ಪತ್ರೆಗಳಲ್ಲಿ ಬೆಡ್ ಆಕ್ಸಿಜನ್ ಸಿಗದೆ ತೊಂದರೆಗೀಡಾಗಿರುವಂತವರಿಗೆ 10 ಲೀಟರ್ ಹಾಗೂ 15 ಲೀಟರ್ ಸಾಮರ್ಥ್ಯವುಳ್ಳ 50 ಆಕ್ಸಿಜನ್ ಕಾನ್ಸಂಟ್ರೇಟರ್ ಗಳನ್ನು ಈಗಾಗಲೇ ಖರೀದಿಸಲಾಗಿದೆ. ಇದು ನಾಳೆಯಿಂದ ಸಾರ್ವಜನಿಕರ ಉಪಯೋಗಕ್ಕೆ ಬರಲಿದೆ ಎಂದು ತಿಳಿಸಿದ್ದಾರೆ.

Related Articles

ಆಕ್ಸಿಜನ್ ಕಾನ್ಸಂಟ್ರೇಟರ್ ಕಿಟ್ ಜೊತೆಗೆ ಜ್ವರ ಪರೀಕ್ಷೆ ಮಾಡುವ ಥರ್ಮಾಮೀಟರ್, ಸ್ಯಾಚುರೇಷನ್ ಹಾಗೂ ಪಲ್ಸ್ ಚೆಕ್ ಮಾಡುವ ಆಕ್ಸಮೀಟರ್ ಉಳ್ಳ ಕಿಟ್ ಗಳನ್ನು ಕೂಡ ನೀಡಲಾಗುತ್ತಿದೆ. ಕೋವಿಡ್ ನಂತಹ ಮಹಾಮಾರಿಯಿಂದಾಗಿ ಅಥಣಿಯ ಆಸ್ಪತ್ರೆಗಳಲ್ಲಿ ಬೆಡ್, ಆಕ್ಸಿಜನ್ ಹಾಗೂ ಔಷಧೋಪಚಾರಗಳು ಸಿಗದೆ ಸಂಕಷ್ಟ ಪರಿಸ್ಥಿತಿಯಲ್ಲಿ ಇರುವ ಜನತೆಗೆ ಸುಸಜ್ಜಿತ ಆಕ್ಸಿಜನ್ ಕಾನ್ಸಂಟ್ರೇಟರ್ ಹಾಗೂ ಬೆಡ್ ನೀಡುವ ಮೂಲಕ ಪ್ರಾಥಮಿಕ ಚಿಕಿತ್ಸೆ ನೀಡುವ ಮುಖೇನ ಅಳಿಲು ಸೇವೆ ಮಾಡುತ್ತಿರುವುದಾಗಿ  ತಿಳಿಸಿದರು.

ಕೊರೊನಾ ಬಂದಿದೆ ಎಂದು ಉದಾಸೀನತೆ ತೋರದೆ ಕೂಡಲೇ ಚಿಕಿತ್ಸೆ ಪಡೆಯಬೇಕು. ಯಾರು ಧೈರ್ಯಗೆಡಬಾರದು, ಭಯದಿಂದಾಗಿಯೇ ಅನೇಕ ಜನ ಜೀವ ತೆತ್ತಿರುವ ಉದಾಹರಣೆ ನಮ್ಮ ಕಣ್ಣಮುಂದಿದೆ ಇದರಿಂದಾಗಿ ಜನತೆ ತಮ್ಮ ತಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಳ್ಳಬೇಕು ಎಂದು ಜನತೆಯಲ್ಲಿ ಮನವಿ ಮಾಡಿದ್ದಾರೆ.

ಜಯತೀರ್ಥ ಕಾಗಲಕರ್ ಕೊರೊನಾಗೆ ಬಲಿ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button