ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಡ್ ಗಾಗಿ ಆಸ್ಪತ್ರೆಗಳಿಗೆ ತಡಕಾಟ ಹೆಚ್ಚುತ್ತಿದೆ. ಆಸ್ಪತ್ರೆಯಿಂದ ಆಸ್ಪತ್ರೆಗೆ ಓಡಾಡುತ್ತಿದ್ದರೆ ಸೋಂಕಿತರ ಸ್ಥಿತಿ ಗಂಭೀರವಾಗಲಿದೆ. ಹಾಗಾಗಿ ಯಾವ ಆಸ್ಪತ್ರೆಗೆ ಹೋದರೆ ಬೆಡ್ ಲಭ್ಯವಿದೆ ಎನ್ನುವ ಮಾಹಿತಿ ಪಡೆದು ಹೋಗುವುದು ಉತ್ತಮ.
ಸಧ್ಯ ಬೆಳಗಾವಿ ಜಿಲ್ಲೆಯ ಯಾವ ಆಸ್ಪತ್ರೆಯಲ್ಲಿ ಯಾವ ಬೆಡ್ ಲಭ್ಯವಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ. ಇಲ್ಲಿ ನೀಡಿರುವ ಮಾಹಿತಿಯಂತೆ ಯಾವುದೇ ಆಸ್ಪತ್ರೆಯಲ್ಲಿ ಬೆಡ್ ಸಿಗದಿದ್ದಲ್ಲಿ ಜಿಲ್ಲಾಡಳಿತ ಇಲ್ಲವೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ದೂರು ನೀಡಬಹುದು.
ಸಧ್ಯ ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ 60 ಆಕ್ಸಿಜನ್ ಬೆಡ್ ಹಾಗೂ 110 ಆಕ್ಸಿಜನ್ ರಹಿತ ಬೆಡ್ ಲಭ್ಯವಿವೆ. ಇದು ನಿನ್ನೆ ಸಂಜೆ 6.30ಕ್ಕೆ ಅಪ್ ಡೇಟ್ ಮಾಡಿದ ಮಾಹಿತಿ. ಕೆಎಲ್ಇ ಆಸ್ಪತ್ರೆಯಲ್ಲಿ ಆಕ್ಸಿಜನ್ ಬೆಡ್ ಸಧ್ಯಕ್ಕೆ ಲಭ್ಯವಿಲ್ಲ. 13 ಆಕ್ಸಿಜನ್ ರಹಿತ ಬೆಡ್ ಗಳು ಲಭ್ಯವಿವೆ.
ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ – https://belagavicovid19.com/hospitals/all
ಇಲ್ಲಿ ಹೆಲ್ಪ್ ಲೈನ್ ನಂಬರ್ ಗಳನ್ನೂ ನೀಡಲಾಗಿದೆ – https://belagavicovid19.com/hospitals/all#helpline
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ